ಚಿಕ್ಕೋಡಿ : ನದಿ ಪ್ರವಾಹದಲ್ಲಿ ಕಾಲು ಜಾರಿ ಬಿದ್ದು ಇಬ್ಬರು ನೀರು ಪಾಲಾದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕುಸನಾಳ-ಇಂಗಳಿ ಸಮೀಪ ನಡೆದಿದೆ.
ರಾಯಬಾಗ ತಾಲೂಕಿನ ನಸಲಾಪುರ ಗ್ರಾಮದ ನಿವಾಸಿಗಳಾದ ಲಕ್ಷ್ಮಣ ಅಪ್ಪಾಸಾಬ ಸಮಾಜ (28) ಹಾಗೂ ಶಾಂತಿನಾಥ ವಸಂತ ಸಮಾಜ (25) ಮೃತರು.
ಕೃಷ್ಣಾ ನದಿಗೆ ಪ್ರವಾಹ ಬಂದಿದ್ದು ಇದೀಗ ನೀರಿನ ಮಟ್ಟದಲ್ಲಿ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕುಸನಾಳ ಗ್ರಾಮದ ತಮ್ಮ ಸಂಬಂಧಿಕರ ಮನೆಗೆ ಬಂದಿರುವ ಅವರು ನದಿ ಬಳಿಗೆ ತೆರಳಿದ್ದಾರೆ. ಈ ವೇಳೆ ನದಿ ನೀರಿನಲ್ಲಿ ಕಾಲು ಜಾರಿ ಬಿದ್ದು ಮೃತ ಪಟ್ಟಿದ್ದಾರೆ ಎನ್ನಲಾಗಿದೆ.
ಇಬ್ಬರಲ್ಲಿ ಒಬ್ಬರಿಗೆ ಮಾತ್ರ ಈಜು ಬರುತ್ತಿದ್ದು ರಕ್ಷಣೆ ಧಾವಿಸಿದಾಗ ಪರಸ್ಪರ ತಬ್ಬಿಕೊಂಡು ಇಬ್ಬರೂ ಮೃತಪಟ್ಟಿದ್ದಾರೆ.
ಕಾಗವಾಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.