ಬೆಳಗಾವಿ: ಹೈ ವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ನಡೆಯಿತು. ಗ್ರಾಮದ ವಿನಾಯಕ್ ಕಲ್ಕಾಂಬಕರ್ (24), ಗೋಪಾಲ್ ಅಗಸಗೇಕರ್ (52) ಮೃತರು. ಮತ್ತೋರ್ವನಿಗೆ ಗಂಭೀರ ಗಾಯವಾಗಿವೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಇದನ್ನೂ ಓದಿ: ಪಿಎಸ್ಐ ಹಗರಣ: 8 ದಿನ ಸಿಐಡಿ ಕಸ್ಟಡಿಗೆ ಅಮೃತ್ ಪಾಲ್
ಮನೆಯ ಮೇಲೆ ಸ್ಟೀಲ್ಶೀಟ್ ಅಳವಡಿಸುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ದುರ್ಘಟನೆ ಸಂಭವಿಸಿದೆ. ಹೆಸ್ಕಾಂ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.