ETV Bharat / state

ಬಸ್ ಮತ್ತು ಕಾರು ಡಿಕ್ಕಿ: ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯ - ಬೆಳಗಾವಿಯಲ್ಲಿ ಬಸ್​ ಅಪಘಾತ ಲೇಟೆಸ್ಟ್​ ಸುದ್ದಿ

ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ, ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

bus and scorpio collide in belgavi
ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯ
author img

By

Published : Dec 11, 2020, 2:17 PM IST

ಬೆಳಗಾವಿ: ಖಾನಾಪುರ ರಾಜ್ಯ ಹೆದ್ದಾರಿಯ ಗಣೇಬೈಲ್ ಗ್ರಾಮದ ಬಳಿ ಬಸ್ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಬೆಳಗಾವಿಯಿಂದ ಖಾನಾಪುರದತ್ತ ಹೊರಟಿದ್ದ ಬಸ್ ಹಾಗೂ ಖಾನಾಪುರದಿಂದ ಬೆಳಗಾವಿ ಕಡೆ ಬರುತ್ತಿದ್ದ ಕಾರು ಗಣೇಬೈಲ್ ಗ್ರಾಮದ ಬಳಿ ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಅದರ ಚಾಲಕ ಮತ್ತು ಇನ್ನೊಬ್ಬ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

bus and scorpio collide in belgavi
ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯ

ಸಣ್ಣ ಪುಟ್ಟ ಗಾಯಗಳಾಗಿರುವ ಬಸ್ ಚಾಲಕ ಹಾಗೂ ಬಸ್‍ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖಾನಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ನಡ್ಡಾ ಬೆಂಗಾವಲು ವಾಹನದ ಮೇಲೆ ದಾಳಿ: ಪ.ಬಂ ಡಿಜಿಪಿಗೆ ಕೇಂದ್ರದಿಂದ ಸಮನ್ಸ್​​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.