ಬೆಳಗಾವಿ: ಬೆಳಗಾವಿಯಿಂದ ರಾಜ್ಯೋತ್ಸವ ಮುಗಿಸಿಕೊಂಡು ಮರಳುತ್ತಿದ್ದಾಗ ಪಾದಚಾರಿಗಳಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡರು. ಈ ಘಟನೆ ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿತು. ಮೃತರನ್ನು ಧಾರವಾಡ ಜಿಲ್ಲೆಯ ನರೇಂದ್ರದ ಲಬೈಕ್ ಹಲಸಿಗರ ಹಾಗೂ ಬೆಳಗಾವಿ ತಾಲ್ಲೂಕಿನ ಬಾಳೇಕುಂದ್ರಿ ಗ್ರಾಮದ ಶ್ರೀನಾಥ ಗುಜನಾಳ ಎಂದು ಗುರುತಿಸಲಾಗಿದೆ. ಧಾರವಾಡ ನಗರದ ಅಲ್ತಾಫ್ ನಾಲಬಂದ ಹಾಗೂ ಕಡತನ ಬಾಗೇವಾಡಿಯ ಅರ್ಜುನ ರಂಗಣ್ಣವರ ತೀವ್ರವಾಗಿ ಗಾಯಗೊಂಡ ಯುವಕರು. ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ 300 ಮೀಟರ್ ದೂರದಲ್ಲಿ ದೊರೆತಿದೆ.
ಇಬ್ಬರು ಯುವಕರು ಬೈಕ್ನಲ್ಲಿ ವೇಗವಾಗಿ ಸಂಚರಿಸುತ್ತಿದ್ದರು. ಹೆದ್ದಾರಿ ಪಕ್ಕದ ಹೋಟೆಲ್‌ನಲ್ಲಿ ಊಟ ಮಾಡಿದ ನಂತರ ಹೆದ್ದಾರಿ ದಾಟುತ್ತಿದ್ದರು. ಈ ಸಂದರ್ಭದಲ್ಲಿ ಪಾದಚಾರಿಗಳಿಗೆ ಬೈಕ್ ಗುದ್ದಿದೆ. ಬೈಕ್ ಸವಾರ ಹಾಗೂ ಪಾದಚಾರಿ ಮೃತಪಟ್ಟಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಲಾಗಿದೆ ಎಂದು ಕಿತ್ತೂರು ಪೊಲೀಸರು ತಿಳಿಸಿದ್ದಾರೆ.
ಇತರೆ ಅಪಘಾತ ಪ್ರಕರಣಗಳು: ಮರಕ್ಕೆ ಕಾರು ಡಿಕ್ಕಿ ಹೊಡೆದು 4 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹರ್ದೋಹಿ ಜಿಲ್ಲೆಯ ಬಿಲಹೌರ್-ಕತ್ರಾ ಹೆದ್ದಾರಿಯಲ್ಲಿ ಸಂಭವಿಸಿತ್ತು. ಅಕ್ಟೋಬರ್ 30ರ ಸೋಮವಾರ ರಾತ್ರಿ 10 ಗಂಟೆಯ ಸುಮಾರಿಗೆ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿಯಾಗಿದೆ. ನಾಲ್ಕು ವರ್ಷದ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದರು. ಈ ಬಗ್ಗೆ ಪೊಲೀಸ್ ಅಧಿಕಾರಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದರು.
ಇದನ್ನೂ ಓದಿ: ಮರಕ್ಕೆ ಕಾರು ಡಿಕ್ಕಿ: 4 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು
ಬಾಲಕಿಗೆ ಬೈಕ್ ಡಿಕ್ಕಿ, ಸಾವು: ತಾಯಿಯೊಂದಿಗೆ ದೇವಸ್ಥಾನಕ್ಕೆ ಹೋಗಿ ಮನೆಗೆ ಹಿಂತಿರುಗುವಾಗ ಬೈಕ್ ಚಾಲಕನೋರ್ವ ಅಜಾಗರೂಕತೆಯಿಂದ ಬಂದು ಬಾಲಕಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಮಗು ಸಾವನ್ನಪ್ಪಿದೆ. ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಸಮೀಪ ಕಳೆದ ಅಕ್ಟೋಬರ್ 28ರ ಶನಿವಾರ ಘಟನೆ ನಡೆದಿದೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರ: ತಾಯಿ ಜೊತೆ ದೇವಸ್ಥಾನಕ್ಕೆ ಬಂದಿದ್ದ ಬಾಲಕಿಗೆ ಬೈಕ್ ಡಿಕ್ಕಿಯಾಗಿ ಸಾವು