ಬೆಳಗಾವಿ: ಸಾರಿಗೆ ನೌಕರರ ಮುಷ್ಕರದ ವೇಳೆ ಕಳ್ಳತನಕ್ಕೆ ಯತ್ನಿಸಿದ ಇಬ್ಬರು ಜೇಬುಗಳ್ಳರನ್ನು ನಗರದ ಮಾರ್ಕೆಟ್ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರಿಗೆ ನೌಕರರ ಜೇಬಿನಿಂದ ಹಣ ಎಗರಿಸಲು ಯತ್ನಿಸುತ್ತಿದ್ದ ಇಬ್ಬರು ಕಳ್ಳರನ್ನು ಹಿಡಿದು ಸಾರಿಗೆ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ರೈತರು, ಕನ್ನಡಪರ ಸಂಘಟನೆಗಳು ಸಾಥ್:
ಸಾರಿಗೆ ನೌಕರರನ್ನು ಸರ್ಕಾರಿ ನೌಕರನ್ನಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆಯುತ್ತಿರುವ ಮಷ್ಕರಕ್ಕೆ ರೈತ ಸಂಘಟನೆ ಹಾಗೂ ಕನ್ನಡಪರ ಸಂಘಟನೆಗಳು ಕೂಡ ಸಾಥ್ ನೀಡಿವೆ. ಜೊತೆಗೆ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಕರವೇ ಶಿವರಾಮೇಗೌಡ ಬಣ ಸಾಥ್ ನೀಡಿವೆ. ರೈತ ಮಹಿಳೆ ಜಯಶ್ರೀ, ರೈತ ಮುಖಂಡ ಚೂನಪ್ಪ ಪೂಜಾರಿ, ಮಹಾಂತೇಶ ರಣಗಟ್ಟಿಮಠ ಸೇರಿದಂತೆ ಹಲವು ಮುಖಂಡರು ಬೆಂಬಲ ನೀಡಿದ್ದಾರೆ.