ಚಿಕ್ಕೋಡಿ: ಉಪವಿಭಾಗಾಧಿಕಾರಿಯಾಗಿದ್ದ ರವೀಂದ್ರ ಕರಲಿಂಗನ್ನವರ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ತಮಿಳುನಾಡು ಮೂಲದ ಐಎಎಸ್ ಅಧಿಕಾರಿ ಉಕೇಶ್ ಕುಮಾರ್ ಅಧಿಕಾರ ಸ್ವೀಕರಿಸಿದರು.
ಕಳೆದ ಎರಡು ವರ್ಷಗಳಿಂದ ಎಸಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ರವೀಂದ್ರ ಕರಲಿಂಗನ್ನವರ ಅವರು ಇಂದು ವರ್ಗಾವಣೆಗೊಂಡಿದ್ದು, ಅವರ ಸ್ಥಾನಕ್ಕೆ ಉಕೇಶ್ ಕುಮಾರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇವರು ರಾಯಚೂರಿನಲ್ಲಿ ಪ್ರೊಬೇಶನರಿಯಾಗಿ ಸೇವೆ ಸಲ್ಲಿಸಿದ್ದು, ಇದೀಗ ಚಿಕ್ಕೋಡಿ ಉಪವಿಭಾಗಾಧಿಕಾರಿ ಹುದ್ದೆ ಅಲಂಕರಿಸಿದ್ದಾರೆ.