ಬೆಳಗಾವಿ : ಸಚಿವ ಉಮೇಶ್ ಕತ್ತಿ ಒಡೆತನದ ಸಕ್ಕರೆ ಕಾರ್ಖಾನೆ ಸಿಬ್ಬಂದಿ ಗೂಂಡಾವರ್ತನೆ ತೋರಿರುವ ಆರೋಪ ಕೇಳಿ ಬಂದಿದೆ.
ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿರುವ ಸಚಿವ ಉಮೇಶ್ ಕತ್ತಿ ಒಡೆತನದ ವಿಶ್ವರಾಜ್ ಕತ್ತಿ ಕಾರ್ಖಾನೆ ಸಿಬ್ಬಂದಿ ಕಬ್ಬು ಸಾಗಿಸುವ ಟ್ರ್ಯಾಕ್ಟರ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಗೂಂಡಾವರ್ತನೆ ತೋರಿದ್ದಾರೆ. ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ವಿಡಿಯೋದಲ್ಲಿ ಚಾಲಕ ಟ್ರ್ಯಾಕ್ಟರ್‌ನಲ್ಲಿ ಹೆಚ್ಚು ಸೌಂಡ್ ಹಾಕಿದ್ದಕ್ಕೆ ಕಾರ್ಖಾನೆ ಕಚೇರಿಗೆ ಕರೆದುಕೊಂಡು ಬಂದು ಆತನ ಮೇಲೆ ಕಬ್ಬು,ಕೋಲಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಚಾಲಕ ಬೇಡಿಕೊಂಡರೂ ಬಿಡದೆ ಮನಬಂದಂತೆ ಥಳಿಸಿದ್ದಾರೆ. ಈ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಚೆನ್ನಮ್ಮ ವೃತ್ತದಲ್ಲಿಯೂ ರಾಜಕೀಯ ಪ್ರಚಾರ : ಅವಳಿನಗರದಲ್ಲಿ ಬಿಜೆಪಿ ಬಾವುಟದ ಕಲರವ