ಬೆಳಗಾವಿ: ವಿಚಾರಣಾಧೀನ ಕೈದಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿ ಆಗಿರುವ ಘಟನೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ನಗರದ ಕೋರ್ಟ್ ಆವರಣದಲ್ಲಿ ಗುರುವಾರ ನಡೆದಿದೆ.
ತಾಲೂಕಿನ ಹಿಂಡಲಗಾ ಜೈಲಿನಿಂದ ಜಿಲ್ಲಾ ನ್ಯಾಯಾಲಯಕ್ಕೆ ಕರೆತರಲಾಗಿದ್ದ ವಿಚಾರಣಾಧೀನ ಕೈದಿ ಪರಾರಿ ಆಗಿದ್ದು, ಅಬ್ದುಲ್ಗನಿ ಶಬ್ಬೀರ್ ಶೇಖ್ ಎಂಬಾತನೇ ತಪ್ಪಿಸಿಕೊಂಡು ಓಡಿಹೋಗಿರುವ ಕೈದಿ. ಈತ ವಿವಿಧ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ.
ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ ಆರೋಪಿ ಕೋರ್ಟ್ ಆವರಣದಲ್ಲಿಯೇ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದಾನೆ. ಬೆಳಗಾವಿ ಎರಡನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಟಿಳಕವಾಡಿ ಪೊಲೀಸರು ಆರೋಪಿಯನ್ನು ಕರೆತಂದಿದ್ದರು. ಪೊಲೀಸರ ಸಮ್ಮುಖದಲ್ಲಿಯೇ ಆರೋಪಿ ಓಡಿಹೋಗಿದ್ದಾನೆ ಎಂದು ತಿಳಿದುಬಂದಿದೆ. ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಕೈದಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.
ಇದನ್ನೂ ಓದಿ: ಉದ್ಯಮದಲ್ಲಿ ಎತ್ತರಕ್ಕೆ ಬೆಳೆಯುತ್ತಿರುವ ಅಸೂಯೆ; ಮಾಲೀಕನ ಪತ್ನಿ ಕೊಲೆ ಮಾಡಿದ್ದ ಆರೋಪಿ ಬಂಧನ