ಅಥಣಿ(ಬೆಳಗಾವಿ): ಅಥಣಿ ಪಟ್ಟಣದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದ ಅಥಣಿ ಘಟಕದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಲಾಕ್ ಡೌನ್ ಆದೇಶದ ಮೇರೆಗೆ ಬಸ್ ನಿಲ್ದಾಣ ಸಂಪೂರ್ಣ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಅಪರಿಚಿತ ವೃದ್ಧ ಅಲ್ಲೆ ವಾಸವಾಗಿದ್ದ ಎಂದು ತಿಳಿದು ಬಂದಿದೆ.
ಪೌರ ಕಾರ್ಮಿಕರು ಬಸ್ ನಿಲ್ದಾಣ ಸ್ವಚ್ಛ ಮಾಡಲು ಬಂದಾಗ ಶವ ಪತ್ತೆಯಾಗಿದೆ. ಅನಂತರ ಅಥಣಿ ಪುರಸಭೆ ಸಿಬ್ಬಂದಿ ಅಲ್ಲಿಂದ ಮೃತದೇಹ ಸ್ಥಳಾಂತರಿಸಿ ಶವಸಂಸ್ಕಾರ ನೆರವೇರಿಸಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿರುವ.