ETV Bharat / state

ದೇಶದಲ್ಲೇ ಕಾಂಗ್ರೆಸ್ ತಿರಸ್ಕೃತ ಪಕ್ಷ: ಪ್ರಹ್ಲಾದ್ ಜೋಶಿ - ಬಿಜೆಪಿ ಅಭ್ಯರ್ಥಿಗಳ ಆಯ್ಕೆ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಬೆಳಗಾವಿ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಕಾಂಗ್ರೆಸ್​ ಪಕ್ಷದ ವಿರುದ್ಧ ಹರಿಹಾಯ್ದರು.

bjp
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
author img

By

Published : Mar 31, 2023, 2:24 PM IST

Updated : Mar 31, 2023, 3:39 PM IST

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಬೆಳಗಾವಿ: ಬೆಳಗಾವಿ ಶೈಕ್ಷಣಿಕ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಆಯ್ಕೆ, ಚುನಾವಣೆ ತಯಾರಿ ಬಗ್ಗೆ ಇಂದು ಸಮಾಲೋಚನೆ ಮಾಡುತ್ತೇವೆ. ಕಾಂಗ್ರೆಸ್ ಪಕ್ಷದ ರೀತಿ ನಮ್ಮದು ಪರಿವಾರದ ಪಾರ್ಟಿ ಅಲ್ಲ. ನಮ್ಮದು ಡೆಮಾಕ್ರಟಿಕ್‌ ಪಾರ್ಟಿ. ಅದರಡಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಆಗುತ್ತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಬೆಳಗಾವಿ ನಗರದಲ್ಲಿ ಬೆಳಗಾವಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೂ ಮೊದಲು ಸಮಾಲೋಚನೆ ಸಭೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಮಾತನಾಡುತ್ತಾ, ಕಾಂಗ್ರೆಸ್ ಪಾರ್ಟಿ ಸುಳ್ಳು ಆಶ್ವಾಸನೆ ಕೊಡುವುದರಲ್ಲಿ ಎಕ್ಸಪರ್ಟ್. ಗ್ಯಾಸ್ ಸಿಡಿಲಿಂಡರ್‌ಗೆ ಹಣ ಕೊಡುತ್ತೇವೆ, ಹೆಣ್ಣು ಮಕ್ಕಳಿಗೆ ಹಣ ಕೊಡುತ್ತೇವೆ ಅಂತ ಹೇಳುತ್ತಾರೆ. ಇವರ ಕಾಲದಲ್ಲಿ ಬೆಲೆ ಏರಿಕೆ ಎಷ್ಟಿತ್ತು ಎಂದು ಅವರು ಪ್ರಶ್ನಿಸಿದರು. ಒಂದು ಕುಟುಂಬಕ್ಕೆ ವರ್ಷಕ್ಕೆ 78 ಸಾವಿರ ರೂ ಕೊಡುತ್ತೇವೆ, ಗ್ಯಾರಂಟಿ ಕಾರ್ಡ್ ನೀಡುತ್ತೇವೆ ಅಂತ ಹೇಳ್ತಿದ್ದಾರೆ. ಅವರು ಏನು ಹೇಳ್ತಾರೋ ಅದನ್ನು ಮಾಡೋದೇ ಇಲ್ಲ ಎಂದರು.

ರಾಜಸ್ಥಾನದಲ್ಲಿ ಕೊಟ್ಟ ಭರವಸೆಗಳನ್ನು ಇನ್ನೂ ಈಡೇರಿಸಿಲ್ಲ. ಕಳೆದ ಬಾರಿ ಕರ್ನಾಟಕದಲ್ಲಿ ಕೊಟ್ಟ ಭರವಸೆಯನ್ನೂ ಈಡೇರಿಸಿಲ್ಲ. ಮೋದಿ ನೇತೃತ್ವದ ಡಬಲ್ ಎಂಜಿನ್ ಸರ್ಕಾರ ಅಭಿವೃದ್ದಿ ‌ಮಾಡುತ್ತಿದೆ. ಇವತ್ತಿನ ಸಭೆಯಲ್ಲಿ ಟಿಕೆಟ್ ಹಂಚಿಕೆ ಕುರಿತು ಅಭಿಪ್ರಾಯ ಸಂಗ್ರಹಿಸುತ್ತೇವೆ ಎಂದು ಹೇಳಿದರು.

ಡಿಕೆಶಿ ಅವರಿಂದ ಬಿಜೆಪಿ ಶಾಸಕರಿಗೆ ಕರೆ ವಿಚಾರ: ಕಾಂಗ್ರೆಸ್​ನವರು ಭ್ರಮನಿರಸನಗೊಂಡಿದ್ದಾರೆ. ಸಿದ್ದರಾಮಯ್ಯ ಇಡೀ ರಾಜ್ಯದಲ್ಲಿ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ಅವರಿಗೆ ಇನ್ನೂ ಸಹ ಕ್ಷೇತ್ರ ಸಿಕ್ಕಿಲ್ಲ. ವರುಣಾದಲ್ಲಿ ಸ್ಪರ್ಧೆ ಮಾಡುತ್ತೇನೆ ಅಂತಿದ್ದಾರೆ. ಅಪ್ಪನಿಗಾಗಿ ಮಗ ದೊಡ್ಡ ತ್ಯಾಗ ಮಾಡಿದ ರೀತಿ ಬಿಂಬಿಸಿಕೊಳ್ತಿದ್ದಾರೆ. ವರುಣಾದಲ್ಲಿ ಸೋಲುತ್ತೇನೆ ಅನ್ನೋ ಭಯಕ್ಕೆ ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸಲು ಹೊರಟಿದ್ದಾರೆ. ಕೋಲಾರ ಸೇರಿದಂತೆ ಬೇರೆ ಬೇರೆ ಕಡೆ ಕ್ಷೇತ್ರ ಹುಡುಕುತ್ತಿದ್ದಾರೆ. ಸಿದ್ದರಾಮಯ್ಯನವರು 224 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿ ಎಂದು ಜೋಶಿ ವ್ಯಂಗ್ಯವಾಡಿದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ದೇಶದಲ್ಲೇ ಕಾಂಗ್ರೆಸ್ ಪಾರ್ಟಿ ಇಸ್ ರಿಜೆಕ್ಟ್ ಪಾರ್ಟಿ. ಮುಂಬರುವ ರಾಜಸ್ಥಾನ, ಛತ್ತೀಸಗಡ್ ರಾಜ್ಯದಲ್ಲೂ ಕಾಂಗ್ರೆಸ್ ಸೋಲುತ್ತೆ. ಈ ಬಾರಿ ರಾಜ್ಯದಲ್ಲಿ ಮೋದಿಯವರ ಕೆಲಸ ನೋಡಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದರು.

ರಮೇಶ್ ಜಾರಕಿಹೊಳಿ, ಸವದಿ ಬಹಿರಂಗ ಹೇಳಿಕೆ ವಿಚಾರ: ಅವರಿಬ್ಬರಿಗೂ ಬಹಿರಂಗವಾಗಿ ಮಾತಾಡದಂತೆ ಈಗಾಗಲೇ ತಾಕೀತು ಮಾಡಿದ್ದೇವೆ. ಎಲ್ಲವನ್ನೂ ಗಮನಿಸುತ್ತಿದ್ದೇವೆ ಮತ್ತು ಎಲ್ಲವನ್ನೂ ಸರಿ ಮಾಡುತ್ತೇವೆ. ಬೆಳಗಾವಿಯಲ್ಲಿ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕುಡ್ಲಗಿ ಶಾಸಕ ಎನ್.ವೈ.ಗೋಪಾಲಕೃಷ್ಣ ರಾಜೀನಾಮೆ

Last Updated : Mar 31, 2023, 3:39 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.