ಬೆಳಗಾವಿ: ಮೂಡಲಗಿಯ ಸಿದ್ಧ ಸಂಸ್ಥಾನ ಮಠದ ಶ್ರೀಪಾದಬೋಧ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆ ಕೇಂದ್ರ ಸಚಿವ ಸುರೇಶ್ ಅಂಗಡಿ ಸಂತಾಪ ಸೂಚಿಸಿದ್ದಾರೆ.
ವಿಷಯ ತಿಳಿದು ಮನಸ್ಸಿಗೆ ತುಂಬಾ ನೋವುಂಟಾಗಿದೆ. ಪೂಜ್ಯರು ಅನೇಕ ಧಾರ್ಮಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಮೂಡಲಗಿ ತಾಲ್ಲೂಕು ರಚನೆಯಲ್ಲಿ ಶ್ರೀಗಳು ಪ್ರಮುಖ ಪಾತ್ರ ವಹಿಸಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಸಂತಾಪ ಸೂಚನೆಯಲ್ಲಿ ತಿಳಿಸಿದ್ದಾರೆ.