ಬೆಳಗಾವಿ: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಮಜಗಾವಿ ಗ್ರಾಮದ ಬಳಿ ನಡೆದಿದೆ.
ಮೃತನ ಬಲಗೈ ಮೇಲೆ ಜೈ ಮಹಾರಾಷ್ಟ್ರ ಎಂದು ಹಚ್ಚೆ ಇದ್ದು, ಈತ ಮಹಾರಾಷ್ಟ್ರ ಮೂಲದವ ಇರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಅಂದಾಜು 35 ವರ್ಷ ವಯಸ್ಸಿನ ಈ ಅಪರಿಚಿತ ವ್ಯಕ್ತಿ ಐದೂವರೆ ಅಡಿ ಎತ್ತರ, ಗೋಧಿ ಮೈಬಣ್ಣ ಚಹರೆ ಹೊಂದಿದ್ದಾನೆ.
ಈ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.