ಅಥಣಿ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವ ಸ್ಥಳದಲ್ಲೇ ಸಾವಿಗೀಡಾದ ಘಟನೆ ಅಥಣಿ ಪಟ್ಟಣ ಶಿವಾಜಿ ವೃತ್ತದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಮಹೇಶ ಬೋಸ್ಲೆ (28) ಎಂದು ಗುರುತಿಸಲಾಗಿದೆ. ಅಥಣಿ-ಸಂಕೇಶ್ವರ ರಸ್ತೆಯಲ್ಲಿನ ಶಿವಾಜಿ ವೃತ್ತದ ಬಳಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಅಪರಿಚಿತ ವಾಹನ ಪತ್ತೆಗೆ ಮುಂದಾಗಿದ್ದಾರೆ.