ಬೆಳಗಾವಿ: ವಾಲ್ಮೀಕಿ ಪರಿಶಿಷ್ಟ ಪಂಗಡ ಜನಾಂಗಕ್ಕೆ ಒಳ ಮೀಸಲಾತಿಯನ್ನು ಪ್ರತ್ಯೇಕವಾಗಿ ಶೇ.7.5ರಷ್ಟು ಹೆಚ್ಚಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಸುಮಾರು 40 ಲಕ್ಷದಷ್ಟು ಜನರು ವಾಲ್ಮೀಕಿ ಸಮುದಾಯದಲ್ಲಿದ್ದಾರೆ. ಕೇವಲ ಶೇ.3ರಷ್ಟು ಮೀಸಲಾತಿಯಲ್ಲಿ ಈಗಾಗಲೇ ಅನೇಕ ಸಮುದಾಯಗಳನ್ನು ಸೇರಿಸಲಾಗಿದ್ದು, ಇದರಿಂದ ನಿಜವಾದ ವಾಲ್ಮೀಕಿ ಸಮುದಾಯದ ಜನರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ವಾಲ್ಮೀಕಿ ಪರಿಶಿಷ್ಟ ಪಂಗಡ ಜನಾಂಗಕ್ಕೆ ಪ್ರತ್ಯೇಕವಾಗಿ ಶೇ.7.5ರಷ್ಟು ಒಳ ಮೀಸಲು ಹೆಚ್ಚಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.