ಬೆಳಗಾವಿ: ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾಗದ ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ನೆರೆ ಸಂತ್ರಸ್ತ ಹಿತರಕ್ಷಣಾ ಸಮಿತಿಯಿಂದ ನೂರಾರು ರೈತರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ನೆರೆ ಸಂತ್ರಸ್ತ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು, ಮಳೆ ಹಾನಿ ಹಾಗೂ ಬೆಳೆ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಅಲ್ಲದೇ ಸರ್ಕಾರ ರೈತರನ್ನು, ಸಂತ್ರಸ್ತರನ್ನು ನಿರ್ಲಕ್ಷಿಸಿದೆ. ಆದಷ್ಟು ಬೇಗ ಸರ್ಕಾರ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಸ್ಥಳಕ್ಕೆ ಆಗಮಿಸಿದ ಡಿಸಿ ಡಾ. ಎಸ್. ಬಿ. ಬೊಮ್ಮನಹಳ್ಳಿ, ಈಗಾಗಲೇ ಸಂತ್ರಸ್ತರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗಿದೆ. ಆದಷ್ಟು ಬೇಗ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.