ETV Bharat / state

ಕಿತ್ತೂರು ಉತ್ಸವದ ವೀರಜ್ಯೋತಿಗೆ ಬೆಳಗಾವಿಯಲ್ಲಿ ಅದ್ಧೂರಿ ಸ್ವಾಗತ - ಈಟಿವಿ ಭಾರತ ಕನ್ನಡ

ಕಿತ್ತೂರು ಉತ್ಸವದ ಹಿನ್ನಲೆಯಲ್ಲಿ ಬೆಳಗಾವಿಗೆ ಆಗಮಿಸಿದ ವೀರಜ್ಯೋತಿಗೆ ಪೂಜೆ ಸಲ್ಲಿಸುವ ಮೂಲಕ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಅನಿಲ್ ಬೆನಕೆ ಸ್ವಾಗತ ಕೋರಿದರು.

veerajyoti-of-kittoor-utsav-gets-a-grand-welcome-in-belgaum
ಕಿತ್ತೂರು ಉತ್ಸವದ ವೀರಜ್ಯೋತಿಗೆ ಬೆಳಗಾವಿಯಲ್ಲಿ ಅದ್ಧೂರಿ ಸ್ವಾಗತ
author img

By

Published : Oct 16, 2022, 7:58 PM IST

ಬೆಳಗಾವಿ : ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಚರಿಸುತ್ತಿರುವ ವೀರಜ್ಯೋತಿಯನ್ನು ನಗರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಅನಿಲ್ ಬೆನಕೆ ಅವರು ವೀರಜ್ಯೋತಿಗೆ ಪೂಜೆ ಸಲ್ಲಿಸುವ ಮೂಲಕ ಬರಮಾಡಿಕೊಂಡರು.

ಬಳಿಕ ಮಾತನಾಡಿದ ಅವರು, ಈ ಬಾರಿ ರಾಜ್ಯಾದ್ಯಂತ ವೀರಜ್ಯೋತಿಯು ಸಂಚಾರ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ‌. ಈ‌ ಬಾರಿ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಘೋಷಿಸುವ ಮೂಲಕ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಬ್ರಿಟಿಷರ ವಿರುದ್ಧ ಹೋರಾಡಿದ ಪ್ರಥಮ ಮಹಿಳೆ ಕಿತ್ತೂರು ಚೆನ್ನಮ್ಮನ ಉತ್ಸವವನ್ನು ಆಚರಿಸುವುದು ನಮಗೆ ಹೆಮ್ಮೆಯ ವಿಷಯವಾಗಿದೆ ಎಂದರು.

veerajyoti-of-kittoor-utsav-gets-a-grand-welcome-in-belgaum
ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಭಾಗಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವತಃ ಮುತುವರ್ಜಿ ವಹಿಸಿ ರಾಜ್ಯಮಟ್ಟದ ಉತ್ಸವವನ್ನಾಗಿ ಘೋಷಿಸಿ ಹೆಚ್ಚಿನ ಅನುದಾನ ನೀಡಿರುತ್ತಾರೆ. ಅ.23ರಿಂದ 25ರವರೆಗೆ ಮೂರುದಿನಗಳ ಕಾಲ ಚನ್ನಮ್ಮನ ಕಿತ್ತೂರಿನಲ್ಲಿ ಅದ್ಧೂರಿ ಉತ್ಸವ ನಡೆಯಲಿದೆ. ಇದಕ್ಕೆ ಸಂಬಂಧಿಸಿದಂತೆ ಅಲ್ಲಿನ ಶಾಸಕರ ನೇತೃತ್ವದಲ್ಲಿ ಎಲ್ಲ ಸಿದ್ಧತೆಗಳು ನಡೆದಿವೆ ಎಂದು ಶಾಸಕ ಅನಿಲ್ ಬೆನಕೆ ತಿಳಿಸಿದರು.

ವಿವಿಧ ಕಲಾತಂಡಗಳು ಭಾಗಿ

ಕೆ.ಆರ್.ಐ.ಡಿ.ಎಲ್. ವ್ಯವಸ್ಥಾಪಕ ನಿರ್ದೇಶಕ ಎಂ.ಜಿ.ಹಿರೇಮಠ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆಯ ಉಪ ಆಯುಕ್ತೆ ಭಾಗ್ಯಶ್ರೀ ಹುಗ್ಗಿ, ವಾರ್ತಾ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವಿದ್ಯಾವತಿ ಭಜಂತ್ರಿ, ತಹಶೀಲ್ದಾರ ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.

veerajyoti-of-kittoor-utsav-gets-a-grand-welcome-in-belgaum
ಕಿತ್ತೂರು ಉತ್ಸವದ ವೀರಜ್ಯೋತಿಗೆ ಬೆಳಗಾವಿಯಲ್ಲಿ ಅದ್ಧೂರಿ ಸ್ವಾಗತ

ಇದಕ್ಕೂ ಮುಂಚೆ ಶಾಸಕ ಅನಿಲ್ ಬೆನಕೆ ಸೇರಿದಂತೆ ಎಲ್ಲ ಗಣ್ಯರು ಚೆನ್ನಮ್ಮ ವೃತ್ತದಲ್ಲಿ ಇರುವ ಕಿತ್ತೂರು ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ‌ಮಾಡಿದರು. ಬಳಿಕ ನಡೆದ ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಭಾಗವಹಿಸಿದ್ದವು. ಇಂದು ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿದ ಬಳಿಕ ಸೋಮವಾರ ಬೆಳಗ್ಗೆ ಚೆನ್ನಮ್ಮನ ಹುಟ್ಟೂರು ಕಾಕತಿಗೆ ವೀರಜ್ಯೋತಿ ಪ್ರಯಾಣ ಬೆಳೆಸಲಿದೆ.

ಇದನ್ನೂ ಓದಿ : ಕಾವೇರಿ ಮಾತೆ ತೀರ್ಥೋದ್ಭವದ ವಿಸ್ಮಯ ಕ್ಷಣಕ್ಕೆ ಸಾಕ್ಷಿಯಾಗಲು ಕಾಯುತ್ತಿರುವ ಭಕ್ತಗಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.