ಅಥಣಿ: ಕೋವಿಡ್-19 ಹರಡದಂತೆ ಸರ್ಕಾರ ವಿಧಿಸಿರುವ ನಿಯಮಗಳನ್ನು ಅಥಣಿ ತಾಲೂಕಿನ ಗ್ರಾಮೀಣ ಭಾಗದ ಜನರು ಚಾಚೂ ತಪ್ಪದೆ ಪಾಲಿಸುತ್ತಿದ್ದಾರೆ.
ಪಟ್ಟಣ ಪ್ರದೇಶದಲ್ಲಿ ಕೆಲವರು ಕೊರೊನಾ ವೈರಸ್ ಭೀತಿ ಇಲ್ಲದೆ ಗುಂಪು ಗುಂಪಾಗಿ ಓಡಾಡುತ್ತಿದ್ದಾರೆ. ವ್ಯಾಪಾರ ವಹಿವಾಟು ನಡೆಸುವ ಜಾಗದಲ್ಲಿ ಸಾವಿರಾರು ಮಂದಿ ಸೇರುತ್ತಾರೆ. ಹಳ್ಳಿಗಳ ಜನ ಮಾತ್ರ ಮನೆಬಿಟ್ಟು ಬರದೆ ಸರ್ಕಾರದ ನಿಯಮಗಳನ್ನು ಪಾಲಿಸುವ ಮೂಲಕ ಮಾದರಿಯಾಗಿದ್ದಾರೆ.
ಗ್ರಾಮೀಣ ಭಾಗದ ಕಿರಾಣಿ ಅಂಗಡಿ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಂಡು ದಿನಸಿ ಖರೀದಿಸುತ್ತಿದ್ದಾರೆ. ರೈತರು ಸಾಮಾಜಿಕ ಅಂತ ಕಾಯ್ದುಕೊಂಡೇ ದೇವಾಲಯ, ಊರು ಕಟ್ಟೆ ಮೇಲೆ ಕುಳಿತು ಹರಟೆ ಹೊಡೆಯುತ್ತಾರೆ.