ಅಥಣಿ: ಅನ್ಯ ರಾಜ್ಯಗಳಿಂದ ಬಂದವರನ್ನು ನಮ್ಮ ಗ್ರಾಮದ ಶಾಲೆಯಲ್ಲಿ ಹೋಮ್ ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಭಾವಿಸಿ ತಾಲೂಕಿನ ಸಪ್ತಸಾಗರ ಗ್ರಾಮಸ್ಥರು ಶಾಲೆಯ ಗೇಟ್ ಬಂದ್ ಮಾಡಿದ್ದಾರೆ.
ಗ್ರಾಮಸ್ಥರು ಸರ್ಕಾರಿ ಪ್ರಾಥಮಿಕ ಶಾಲೆ ಗೇಟ್ಗೆ ಮುಳ್ಳಿನ ಗಿಡಗಳನ್ನು ಅಡ್ಡಲಾಗಿ ಹಾಕಿದ್ದರು. ಅಲ್ಲಿ ಯಾರನ್ನೂ ಕ್ವಾರಂಟೈನ್ ಮಾಡುವುದಿಲ್ಲ ಎಂದು ತಾಲೂಕು ಆಡಳಿತ ಸ್ಪಷ್ಟಪಡಿಸಿದ ಬಳಿಕ ಮುಳ್ಳಿನ ಗಿಡಗಳನ್ನು ಗ್ರಾಮಸ್ಥರು ತೆರವುಗೊಳಿಸಿದ್ದಾರೆ.