ಚಿಕ್ಕೋಡಿ: ಬೇಸಿಗೆ ಬರುವ ಮೊದಲೇ ನೀರಿಗೆ ಹಾಹಾಕಾರ ಉಂಟಾಗಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಎಲಿಮುನ್ನೊಳ್ಳಿ ಗ್ರಾಮದಲ್ಲಿ ನಡೆದಿದೆ.
ಓದಿ: ಹಿಮ ದುರಂತ.. ತನ್ನ ಮಾಲೀಕನ ಬರುವಿಕೆಗಾಗಿ ಊಟ ಬಿಟ್ಟು ಕಾಯುತ್ತಿರುವ ಶ್ವಾನ..
ಗ್ರಾಮಸ್ಥರು ಖಾಲಿ ಕೊಡ ಹಿಡಿದು ಗ್ರಾಪಂ ಸದಸ್ಯರು ಹಾಗೂ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ತಿಂಗಳಿನಿಂದ ಗ್ರಾಮದಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಬರುತ್ತಿಲ್ಲ. ಈ ಕುರಿತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮತ್ತು ಹುಕ್ಕೇರಿ ಗ್ರಾಮಿಣ ಕುಡಿಯುವ ನೀರು ಸರಬರಾಜು ಇಲಾಖೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ಆರೋಪಿಸಿದ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ನೂರಾರು ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಖಾಲಿ ಕೊಡದೊಂದಿಗೆ ಆಗಮಿಸಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.