ಬೆಳಗಾವಿ : ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ತಯಾರಿ ಎಲ್ಲಾ ಕಡೆ ಜೋರಾಗಿದೆ. ರಾಜಕೀಯ ಪಕ್ಷಗಳು ನಾಳೆ ಪ್ರಚಾರ ನಡೆಸಲು ಕೊನೆ ದಿನವಾಗಿರುವುದರಿಂದ ಸುಡುವ ಬಿಸಿಲನ್ನು ಲೆಕ್ಕಿಸದೆ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಮತ್ತೊಂದೆಡೆ ನಟ ನಟಿಯರು ಕಡ್ಡಾಯವಾಗಿ ಮತದಾನ ಮಾಡುವಂತೆ ರಾಜ್ಯದ ಜನರಿಗೆ ಮನವಿ ಮಾಡುತ್ತಿದ್ದಾರೆ.
ಇದೀಗ ವಿನೂತನವಾಗಿ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ನಗರದಲ್ಲಿ ಮತದಾನ ಜಾಗೃತಿಗಾಗಿ ಪೂರ್ಣಕುಂಭ ಹಾಗೂ ಕಾಲ್ನಡಿಗೆ ಜಾಥಾ ನಡೆಸಲಾಯಿತು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹರ್ಷಲ್ ಭೊಯರ್ ಅವರು ಎಲ್.ಐ.ಸಿ ಕಚೇರಿ ಆವರಣದಲ್ಲಿ ಇಂದು ಹಸಿರು ನಿಶಾನೆ ತೋರಿಸುವ ಮೂಲಕ ಜಾಥಾಗೆ ಚಾಲನೆ ನೀಡಿದರು.
ಇದನ್ನೂ ಓದಿ : ಶೇಕಡಾ 69 ರಷ್ಟು ಮಹಿಳೆಯರಿಂದ ಮುದ್ರಾ ಯೋಜನೆ ಸದ್ಬಳಕೆ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
"ನನ್ನ ಮತ ಮಾರಾಟಕಿಲ್ಲ" , ಮತದಾನದಿಂದ ವಂಚಿತರಾಗಬೇಡಿ, ನಮ್ಮ ಮತ ನಮ್ಮ ಹಕ್ಕು, ಆಮಿಷಕ್ಕೆ ಮರುಳಾಗದಿರಿ ಯೋಚಿಸಿ ಮತ ಚಲಾಯಿಸಿ, ಆಮಿಷಗಳನ್ನು ತಿರಸ್ಕರಿಸಿ ನಿಮ್ಮಿಷ್ಟದಂತೆ ಹಕ್ಕು ಚಲಾಯಿಸಿ, ಪ್ರತಿ ಮತವು ಅಮೂಲ್ಯ ತಪ್ಪದೇ ಮತ ಚಲಾಯಿಸಿ ಎಂದು ವಿವಿಧ ಮತಜಾಗೃತಿ ಘೋಷಣೆಗಳನ್ನು ಕೂಗುವುದರ ಮುಖಾಂತರ ಸಾರ್ವಜನಿಕರಲ್ಲಿ ಮತಜಾಗೃತಿ ಮೂಡಿಸಲಾಯಿತು.
ಇದನ್ನೂ ಓದಿ : ಹ್ಯಾಟ್ರಿಕ್ ಜಯ ಸಾಧಿಸಿರುವ ಸತೀಶ್ ರೆಡ್ಡಿ ನಿದ್ದೆಗೆಡಿಸಿದ ಕಾಂಗ್ರೆಸ್ ಅಭ್ಯರ್ಥಿ: ಯಾರಾಗಲಿದ್ದಾರೆ ಬೊಮ್ಮನಹಳ್ಳಿ ಬಾಸ್?
ಪೂರ್ಣಕುಂಭ ಜಾಥಾ ಕಾರ್ಯಕ್ರಮವು ನಗರದ ಎಲ್.ಐ.ಸಿ ಕಚೇರಿಯಿಂದ ಪ್ರಾರಂಭವಾಗಿ ರಾಣಿಚೆನ್ನಮ್ಮ ವೃತ್ತದವರೆಗೆ ನಡೆಯಿತು. ಮತದಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಬಸರಾಜ ಎನ್., ಜಿಲ್ಲಾ ಐಇಸಿ ಸಂಯೋಜಕ ಪ್ರಮೋದ ಗೋಡೆಕರ್, ಜಿಲ್ಲಾ ಎಸ್.ಬಿ.ಎಂ ಸಮಾಲೋಚಕ ಬಾಹುಬಲಿ ಮೆಳವಂಕಿ, ತಾಲ್ಲೂಕು ಐಇಸಿ ಸಂಯೋಜಕ ರಮೇಶ ಮಾದರ ಹಾಗೂ ಜಿಲ್ಲೆಯ ವಿಶೇಷ ಚೇತನರು ಭಾಗವಹಿಸಿದ್ದರು.
ಇದನ್ನೂ ಓದಿ : ಇಂದಿರಾ ಗರೀಬಿ ಹಠಾವೋ ಘೋಷಣೆಯನ್ನು ಜಾರಿಗೆ ತಂದಿದ್ದು ಪ್ರಧಾನಿ ಮೋದಿ: ಅಸ್ಸೋಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ