ETV Bharat / state

16 ಚಿನ್ನದ ಪದಕ ಪಡೆದು ವಿದ್ಯಾರ್ಥಿನಿ ದಾಖಲೆ.. ಭಾರತ್ ಬಯೋಟೆಕ್ ಎಂಡಿ ಸೇರಿ ಮೂವರಿಗೆ VTU ಗೌರವ ಡಾಕ್ಟರೇಟ್

author img

By

Published : Mar 10, 2022, 1:39 PM IST

Updated : Mar 10, 2022, 3:54 PM IST

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 21ನೇ ಘಟಿಕೋತ್ಸವದಲ್ಲಿ ಬುಶ್ರಾ ಮತೀನ್ 16 ಚಿನ್ನದ ಪದಕ ಪಡೆಯುವ ಮೂಲಕ ಹೊಸ ದಾಖಲೆ ಬರೆದರು. ಇದೇ ವೇಳೆ, ಭಾರತ್ ಬಯೋಟೆಕ್ ಎಂಡಿ ಡಾ. ಕೃಷ್ಣಾ ಎಲ್ಲ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

16 ಚಿನ್ನದ ಪದಕ ಪಡೆದು ವಿದ್ಯಾರ್ಥಿನಿ ದಾಖಲೆ
16 ಚಿನ್ನದ ಪದಕ ಪಡೆದು ವಿದ್ಯಾರ್ಥಿನಿ ದಾಖಲೆ

ಬೆಳಗಾವಿ: ಬಿಇ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಬುಶ್ರಾ ಮತೀನ್ 16 ಚಿನ್ನದ ಪದಕ ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ. ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 21 ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿನಿ ಚಿನ್ನದ ಪದಕಗಳನ್ನು ಕೊರಳಿಗೇರಿಸಿಕೊಂಡರು.

ವಿವಿ ಇತಿಹಾಸದಲ್ಲೇ ಅತಿಹೆಚ್ಚು ಪದಕ ಪಡೆದ ಗೌರವಕ್ಕೆ ಬುಶ್ರಾ ಮತೀನ್ ಪಾತ್ರರಾದರು. ಈವರೆಗಿನ ವಿವಿ ಇತಿಹಾಸದಲ್ಲಿ ಅತಿ ಹೆಚ್ಚು ಅಂದರೆ 13 ಚಿನ್ನದ ಪದಕಗಳನ್ನು ಗಳಿಸಿದ್ದ ದಾಖಲೆ ಇತ್ತು. ಬುಶ್ರಾ ಮತೀನ್​​ಗೆ 16 ಚಿನ್ನದ ಪದಕಗಳನ್ನು ನೀಡಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಭಿನಂದಿಸಿದರು.

ಬೆಂಗಳೂರು ಬಿ.ಎನ್.ಎಂ. ತಾಂತ್ರಿಕ ಸಂಸ್ಥೆಯ ಇ ಅಂಡ್ ಸಿ ವಿಭಾಗದ ಸ್ವಾತಿ ದಯಾನಂದ, ಬೆಳಗಾವಿಯ ಕೆ.ಎಲ್.ಇಯ ಡಾ.ಎಂ.ಎಸ್. ಶೇಷಗಿರಿ ಕಾಲೇಜಿನ ವಿವೇಕ್ ಭದ್ರಕಾಳಿ, ಬಳ್ಳಾರಿಯ ಚಂದನಾ ಎಂ ತಲಾ 7 ಚಿನ್ನದ ಪದಕ ಪಡೆದರು.

ಡಾಕ್ಟರೇಟ್ ಗೌರವ ಪ್ರಧಾನ: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 21 ನೇ ಘಟಿಕೋತ್ಸವದಲ್ಲಿ ಹೈದರಾಬಾದ್​​ನ ಭಾರತ್ ಬಯೋಟೆಕ್ ಇಂಟರ್ನ್ಯಾಷನಲ್ ಲಿಮಿಟೆಡ್​​ನ ವ್ಯವಸ್ಥಾಪಕ ನಿರ್ದೇಶಕ ಡಾ. ಕೃಷ್ಣಾ ಎಲ್ಲಾ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.

ಡಾ. ಕೃಷ್ಣಾ ಎಲ್ಲಾ ಅವರ ಪರವಾಗಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹಾಗೂ ಇನ್ಫೋಸಿಸ್ ಸಹಸಂಸ್ಥಾಪಕ ಸೇನಾಪತಿ ಕ್ರಿಶ್ ಗೋಪಾಲಕೃಷ್ಣನ್ ಅವರು ಡಾಕ್ಟರ್ ಆಫ್ ಸೈನ್ಸ್ ಗೌರವ ಪದವಿ ಸ್ವೀಕರಿಸಿದರು. ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಪ್ರಶಸ್ತಿ ಪ್ರದಾನ ಮಾಡಿದರು. ಬೆಂಗಳೂರು ಭಾರತೀಯ ವಿಜ್ಞಾನ ಮಂದಿರ ಪ್ರಾಧ್ಯಾಪಕ ಪ್ರೊ. ರೋಹಿನಿ ಗೋಡಬೋಲೆ ಅವರ ಅನುಪಸ್ಥಿತಿಯಲ್ಲಿ ವಿಟಿಯು ಕುಲಪತಿ ಪ್ರೊ. ಕರಿಸಿದ್ದಪ್ಪ ಅವರು ರಾಜ್ಯಪಾಲರಿಂದ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದರು.

Last Updated : Mar 10, 2022, 3:54 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.