ಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮುಂದುವರಿದ ಮಹಾಮಳೆಯಿಂದಾಗಿ ಹಿರಣ್ಯಕೇಶಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿರುವ ಸುಪ್ರಸಿದ್ಧ ದುರ್ಗಾದೇವಿ ದೇವಸ್ಥಾನಕ್ಕೆ ಜಲದಿಗ್ಬಂಧನವಾಗಿದ್ದು, ಹಿರಣ್ಯಕೇಶಿ ನದಿ ತೀರದ ಕೊಟಬಾಗಿ ಗ್ರಾಮದಲ್ಲಿರುವ ಈ ದೇವಸ್ಥಾನಕ್ಕೆ ನದಿ ನೀರು ನುಗ್ಗಿದೆ.
ಹಿರಣ್ಯಕೇಶಿ ನದಿ ತೀರದ ಜನರು ಆತಂಕದಲ್ಲಿದ್ದಾರೆ.