ETV Bharat / state

ಮಹಾರಾಷ್ಟ್ರದಲ್ಲಿ ತಗ್ಗಿದ ಮಳೆ: ಕೃಷ್ಣಾ ನದಿ ತೀರದ ಗ್ರಾಮಸ್ಥರು ನಿರಾಳ - ಕೃಷ್ಣಾ ನದಿ

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ತಗ್ಗಿದ್ದು, ಸತಾರ ಜಿಲ್ಲೆಯ ಕೊಯ್ನಾದಿಂದ ಕಡಿಮೆ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಕೃಷ್ಣಾ ನದಿ ತೀರದ ಗ್ರಾಮಸ್ಥರು ಕೊಂಚ ನಿರಾಳರಾಗಿದ್ದಾರೆ.

krishna
krishna
author img

By

Published : Aug 21, 2020, 12:25 PM IST

ಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ತಗ್ಗಿದ್ದು, ಸತಾರ ಜಿಲ್ಲೆಯ ಕೊಯ್ನಾದಿಂದ ಕೇವಲ 2,100 ಕ್ಯೂಸೆಕ್ ನೀರನ್ನು ವಿದ್ಯುತ್ ತಯಾರಿಕಾ ಘಟಕದ ಮೂಲಕ ಬಿಡುಗಡೆ ಮಾಡಲಾಗುತ್ತಿದ್ದು, 11 ಗಂಟೆಗೆ ಕೊಯ್ನಾ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

ತಗ್ಗಿದ ಮಳೆ ಆರ್ಭಟ

ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ 2 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ 1 ಅಡಿ ನೀರು ಇಳಿಕೆಯಾಗಿದೆ‌. ಇದರಿಂದ ನಿಪ್ಪಾಣಿ, ಚಿಕ್ಕೋಡಿ, ರಾಯಬಾಗ, ಕಾಗವಾಡ, ಅಥಣಿ ತಾಲೂಕಿನ ಕೃಷ್ಣಾ ನದಿ ತೀರದ ಗ್ರಾಮಸ್ಥರು ಕೊಂಚ ನಿರಾಳರಾಗಿದ್ದಾರೆ.

ಚಿಕ್ಕೋಡಿ ಉಪ ವಿಭಾಗದಲ್ಲಿ ಕೃಷ್ಣಾ ನದಿ ನೀರಿನಿಂದ 11 ಸೇತುವೆಗಳು ಜಲಾವೃತವಾಗಿದ್ದು, ಸಾರ್ವಜನಿಕರು ಪರ್ಯಾಯ ಮಾರ್ಗದಿಂದ ಸಂಚರಿಸುತ್ತಿದ್ದಾರೆ‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.