ಚಿಕ್ಕೋಡಿ: ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿ ಮತ್ತೆ ಮಳೆ ಮುಂದುವರೆದಿದ್ದು, ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಪ್ರಮಾಣವನ್ನು ಹೆಚ್ಚಿಸಲಾಗಿದೆ .
ಕೊಯ್ನಾ ಜಲಾಶಯದಿಂದ ಬೆಳಿಗ್ಗೆ 8.30 ಕ್ಕೆ 25,604 ಕ್ಯೂಸೇಕ್ ನೀರು ಬಿಡುಗಡೆ ಮಾಡಲಾಗಿದ್ದು, 11 ಗಂಟೆ ಸುಮಾರಿಗೆ 35 ಸಾವಿರ ಕ್ಯೂಸೆಕ್ ಬಿಡಲಾಗಿದೆ. ಅಲ್ಲದೇ ಮಧ್ಯಾಹ್ನ 2 ಗಂಟೆ ಸುಮಾರಿಗೆ 40 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಕೊಯ್ನಾ ಜಲಾನಯನ ಪ್ರದೇಶದ ಅಧಿಕಾರಿಳಿಂದ ಮಾಹಿತಿ ಲಭ್ಯವಾಗಿದೆ.
ಇನ್ನು ರಾಧಾನಗರಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಈ ಜಲಾಶಯದಿಂದ 12 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಈಗಾಗಲೇ ಕೃಷ್ಣಾ ನದಿಗೆ ಒಂದು ಲಕ್ಷ ಕ್ಯೂಸೇಕ್ ನೀರು ಹರಿದು ಬರುತ್ತಿದೆ. ಹೀಗಾಗಿ ಮತ್ತೆ ಕೃಷ್ಣಾ ನದಿ ತೀರದ ಜನರಲ್ಲಿ ಆತಂಕ ಹೆಚ್ವಾಗಿದೆ.