ಬೆಳಗಾವಿ: ನಿನ್ನೆಯಿಂದ ಖಾನಾಪುರ ತಾಲೂಕಿನಾದ್ಯಂತ ಭಾರೀ ಮಳೆಯಾಗಿದ್ದು, ನವಿಲು ತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಪರಿಣಾಮ ನದಿ ಪಾತ್ರದ ಜನರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.
ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಮಲಪ್ರಭಾ ನದಿಗೆ ನೀರಿನ ಒಳಹರಿವು ಹೆಚ್ಚಾಗಿದೆ. ಹೀಗಾಗಿ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣ ಹೊರವಲಯದಲ್ಲಿರುವ ನವಿಲು ತೀರ್ಥ ಜಲಾಶಯದಿಂದ ಇಂದು ಮಲಪ್ರಭಾ ನದಿಗೆ ಮತ್ತೆ 11 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಮತ್ತೆ ಮುನವಳ್ಳಿಯ ಹಳೇ ಸೇತುವೆ ಮುಳುಗಡೆ ಆಗಿದ್ದು, ರಾಮದುರ್ಗ ತಾಲೂಕಿನ ಕೆಲ ಗ್ರಾಮಗಳು ಜಲಾವೃತವಾಗುವ ಭೀತಿ ಎದುರಾಗಿದೆ.