ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಹಾಗೂ ಚಿಕ್ಕೋಡಿ ಉಪ ವಿಭಾಗದಲ್ಲಿ ಕಳೆದೆರಡು ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಸತಾರ ಜಿಲ್ಲೆಯ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಸ್ಥಗಿತಗೊಳಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ ಕೊಯ್ನಾ ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಇಳಿಕೆಯಾದ ಹಿನ್ನೆಲೆಯಲ್ಲಿ ಕೊಯ್ನಾದಿಂದ ನೀರು ಬಿಡುಗಡೆ ಸ್ಥಗಿತಗೊಳಿಸಲಾಗಿದೆ.
ಒಂದು ವೇಳೆ ಕೊಯ್ನಾ ಜಲಾನಯನ ಭಾಗದಲ್ಲಿ ಮಳೆಯಾದರೆ ನೀರು ಬಿಡುವ ಸಾಧ್ಯತೆ ಇದೆ. 105 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಕೊಯ್ನಾ ಜಲಾಶಯ ಸದ್ಯ 92 ಟಿಎಂಸಿ ಭರ್ತಿಯಾಗಿದೆ. ಕೃಷ್ಣಾ ನದಿ ತೀರದ ಜನ ಪ್ರವಾಹ ಭೀತಿಯಿಂದ ಕೊಂಚ ನಿರಾಳರಾಗಿದ್ದಾರೆ.