ETV Bharat / state

ಲೋಕಸಭೆ ಚುನಾವಣೆ ಸಂಬಂಧ ಚರ್ಚೆ ನಡೆಸಲು ದೆಹಲಿಗೆ ಹೊರಟಿದ್ದೇವೆ : ಸತೀಶ್ ಜಾರಕಿಹೊಳಿ - ಲೋಕಸಭೆ ಚುನಾವಣೆ ಹಿನ್ನಲೆ ಹೈಕಮಾಂಡ್​ ಸಭೆ

ಲೋಕಸಭೆ ಚುನಾವಣೆ ಹಿನ್ನಲೆ ಹೈಕಮಾಂಡ್​ ಸಭೆ ಕರೆದಿದೆ. ಈ ಹಿನ್ನೆಲೆ ಕೆಲವರು ದೆಹಲಿಗೆ ಹೋಗುತ್ತಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

we-are-going-to-delhi-to-discuss-lok-sabha-elections-satish-jarakiholi
ಲೋಕಸಭೆ ಚುನಾವಣೆ ಸಂಬಂಧ ಚರ್ಚೆ ನಡೆಸಲು ದೆಹಲಿಗೆ ಹೊರಟಿದ್ದೇವೆ : ಸತೀಶ್ ಜಾರಕಿಹೊಳಿ
author img

By

Published : Aug 1, 2023, 8:24 PM IST

ಸಚಿವ ಸತೀಶ್ ಜಾರಕಿಹೊಳಿ

ಚಿಕ್ಕೋಡಿ (ಬೆಳಗಾವಿ): ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆ ಪಕ್ಷ ಸಂಘಟನೆಯ ಕುರಿತು ಚರ್ಚೆ ನಡೆಸಲು ದೆಹಲಿಯಲ್ಲಿ ಹೈಕಮಾಂಡ್ ಸಭೆ ಕರೆದಿದೆ. ಈ ನಿಟ್ಟಿನಲ್ಲಿ ಕೆಲವರು ದೆಹಲಿಗೆ ಹೊರಟಿದ್ದೇವೆ ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಕೆಡಿಪಿ ಸಭೆ ನಡೆಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿವರ ವಿರುದ್ಧ ಶಾಸಕರು ದೂರು ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿ, ಅದೆಲ್ಲ ಮುಗಿದು ಹೋದ ಅಧ್ಯಾಯ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಜವಾಬ್ದಾರಿ ತೆಗೆದುಕೊಂಡಿದ್ದು ಎಲ್ಲಾ ಸರಿ ಮಾಡುವುದಾಗಿ ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಆಯಾ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರಿಗೇ ಜವಾಬ್ದಾರಿ ನೀಡಲಾಗಿದೆ ಎಂದರು.

ಗ್ಯಾರಂಟಿ ಯೋಜನೆಯಿಂದಾಗಿ ಉಳಿದ ಅಭಿವೃದ್ಧಿ ಕಾಮಗಾರಿಗೆ ಹಣ ಕೊಡಲು ಆಗುವುದಿಲ್ಲ ಎಂಬ ಡಿಸಿಎಂ ಡಿಕೆಶಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಅಭಿವೃದ್ಧಿ ಮಾಡಕ್ಕಾಗಲ್ಲ ಎಂದು ಹೇಳಿಲ್ಲ. ಅನುದಾನ ಜಾಸ್ತಿ ಮಾಡಲು ಆಗುವುದಿಲ್ಲ ಎಂದಿದ್ದಾರೆ. ಕನಿಷ್ಠ ಅಭಿವೃದ್ಧಿ ಕಾರ್ಯವನ್ನು ಮಾಡುತ್ತೇವೆ ಎಂದು ಹೇಳಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಕೋಲ್ಡ್‌ವಾರ್ ಎಂಬ ವಿಚಾರವಾಗಿ ಮಾತನಾಡಿ, ರಾಜಕೀಯದಲ್ಲಿ ಎಲ್ಲಾ ಕಡೆ ಕೋಲ್ಡ್​ ವಾರ್​ ಇದ್ದೇ ಇರುತ್ತದೆ.
ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷಗಳಲ್ಲೂ Cold ವಾರ್, Hot ವಾರ್ ಇದ್ದೇ ಇರುತ್ತೆ ಎಂದರು. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಚಾರವಾಗಿ ಮಾತನಾಡಿ, ಚಿಕ್ಕೋಡಿ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆ ಬಗ್ಗೆ ಇನ್ನೂ ಚರ್ಚೆ ಆಗಬೇಕು. ಚುನಾವಣೆಗೆ ನಿಲ್ಲುವವರಿಗೆ ಆಸಕ್ತಿ ಇರಬೇಕು. ಅದನ್ನೆಲ್ಲ ನಾವು ಹೇಳಕ್ಕಾಗಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಆಡಳಿತ ಮತ್ತು ಅಧಿಕಾರಿಗಳ ಕಾರ್ಯವೈಖರಿಗೆ ಚುರುಕು ಮುಟ್ಟಿಸಲು ತಾಲೂಕು ಮಟ್ಟದಲ್ಲಿ ಕೆಡಿಪಿ ಸಭೆ ನಡೆಸಲಾಗುವುದು. ತಾಲೂಕಿನಲ್ಲಿ ಅಧಿಕಾರಿಗಳ ಕೆಡಿಪಿ ಸಭೆ ನಡೆಸುವುದರಿಂದ ಜನಸಾಮಾನ್ಯರಿಗೆ ಒಳ್ಳೆಯ ಸೇವೆಯನ್ನು ನೀಡಲು ಸಾಧ್ಯವಾಗುತ್ತದೆ. ಈ ಸಂಬಂಧ ಪ್ರತಿ ತಾಲೂಕುಗಳಲ್ಲಿ ಅಧಿಕಾರಿಗಳ ಸಭೆ ನಡೆಸುತ್ತೇವೆ ಎಂದು ಹೇಳಿದರು.

2013ರಲ್ಲೂ ನಾನು ಮಂತ್ರಿಯಾಗಿದ್ದಾಗ ಪ್ರತಿ ತಾಲೂಕಿಗಳಿಗೆ ಭೇಟಿ ಕೊಟ್ಟು ಅಧಿಕಾರಿಗಳ ಮಟ್ಟದಲ್ಲಿ ಸಭೆ ನಡೆಸಿ ಅಲ್ಲಿನ ಸಮಸ್ಯೆಗಳನ್ನು ಆಲಿಸುತ್ತಿದ್ದೆ. ಈ ಮೂಲಕ ಜನಸಾಮಾನ್ಯರಿಗೆ ಒಳ್ಳೆಯ ಸೇವೆಯನ್ನು ನೀಡಲಾಗುತ್ತಿತ್ತು. ಅದೇ ರೀತಿ ಈ ಬಾರಿಯೂ ಜಿಲ್ಲಾ ಉಸ್ತುವಾರಿ ಸಚಿವನಾಗಿ ಪ್ರತಿ ತಾಲೂಕಿಗೆ ಭೇಟಿ ನೀಡಿ ಸ್ಥಳೀಯ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ ಎಂದರು.

ಇದನ್ನೂ ಓದಿ : ಕಾಂಗ್ರೆಸ್ ಸರ್ಕಾರದಲ್ಲಿ ದುಬಾರಿ ದುನಿಯಾ, ಬೆಲೆ ಏರಿಕೆಯೇ ಆರನೇ ಗ್ಯಾರಂಟಿ: ಬೊಮ್ಮಾಯಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.