ETV Bharat / state

ಪ್ರಚೋದನಕಾರಿ ಹೇಳಿಕೆಗಳನ್ನು ರೆಕಾರ್ಡ್ ಮಾಡಿಕೊಳ್ಳುತ್ತಿದ್ದೇವೆ: ಎಡಿಜಿಪಿ ಅಲೋಕ್ ಕುಮಾರ್

ಪ್ರಚೋದನಕಾರಿ ಹೇಳಿಕೆಗಳನ್ನು ರೆಕಾರ್ಡ್ ಮಾಡಿಕೊಳ್ಳುತ್ತಿದ್ದೇವೆ. ಸಮಯ ಬಂದಾಗ ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

adgp alok kumar
ಎಡಿಜಿಪಿ ಅಲೋಕ್ ಕುಮಾರ್
author img

By

Published : Jun 4, 2022, 5:05 PM IST

Updated : Jun 4, 2022, 5:15 PM IST

ಬೆಳಗಾವಿ: ರಾಜ್ಯದಲ್ಲಿ ಕಾನೂನು ಉಲ್ಲಂಘನೆ ಮಾಡಿದವರ ವಿರುದ್ಧ ನಾವು ಕ್ರಮ ಜರುಗಿಸುತ್ತಿದ್ದು, ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವುದನ್ನು ರೆಕಾರ್ಡ್ ಮಾಡಿಕೊಳ್ಳುತ್ತಿದ್ದೇವೆ ಎಂದು ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಸಮುದಾಯಕ್ಕೂ ಒಂದೇ ಕಾನೂನು. ಪ್ರಚೋದನಕಾರಿ ಹೇಳಿಕೆಗಳನ್ನು ರೆಕಾರ್ಡ್ ಮಾಡಿಕೊಂಡು ಕ್ರಮ ಜರುಗಿಸುತ್ತೇವೆ‌‌. ಎಲ್ಲೆಲ್ಲಿ ಏನು ಕ್ರಮ ಜರುಗಿಸಬೇಕು ಅದನ್ನ ನಾವು ಮಾಡುತ್ತಿದ್ದೇವೆ. ಸಂಘಟನೆಗಳ ಮೇಲೂ ಕಣ್ಣಿಟ್ಟಿದ್ದೇವೆ. ಆ ಸಂಘಟನೆಗಳ ಹೇಳಿಕೆ, ಚಟುವಟಿಕೆಯನ್ನು ರೆಕಾರ್ಡ್ ಬಿಲ್ಡ್ ಮಾಡುತ್ತಿದ್ದೇವೆ. ‌ಸಮಯ ಬಂದಾಗ ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದರು.

ಎಡಿಜಿಪಿ ಅಲೋಕ್ ಕುಮಾರ್

ಶ್ರೀರಂಗ ಪಟ್ಟಣ ಚಲೋ ವಿಚಾರವಾಗಿ ಮಾತನಾಡಿ, ಫೀಲ್ಡ್‌ನಲ್ಲಿ ಕಾನೂನು ಏನಿದೆಯೋ ಅದಕ್ಕೆ ಎಲ್ಲರೂ ಬದ್ಧವಾಗಿರಬೇಕು. ಶ್ರೀರಂಗಪಟ್ಟಣದಲ್ಲಿ ಬಿಗಿ ಬಂದೋಬಸ್ತ್ ನಡೆಯುತ್ತಿದೆ. ನಾವು 144ಸೆಕ್ಷನ್ ಜಾರಿ ಮಾಡಿದ್ದೇವೆ. ಕಾನೂನು ಉಲ್ಲಂಘಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರಗಿಸುತ್ತೇವೆ‌ ಎಂದು ಹೇಳಿದರು.

ಇದನ್ನೂ ಓದಿ: ಶ್ರೀರಂಗಪಟ್ಟಣ ಚಲೋಗೆ ತಡೆ: ಬನ್ನಿಮಂಟಪದಲ್ಲಿ ಹಿಂದೂ ಕಾರ್ಯಕರ್ತರಿಂದ ಭಜನೆ

ಹಿಜಾಬ್‌ಗೂ ಪೊಲೀಸ್ ಇಲಾಖೆಗೂ ನೇರವಾಗಿ ಯಾವುದೇ ಸಂಬಂಧ ಇಲ್ಲ. ಶಿಕ್ಷಣ ಇಲಾಖೆ, ಡಿಸಿ ಅವರು ಅದನ್ನು ನೋಡಿಕೊಳ್ಳುತ್ತಾರೆ. ಕಾನೂನು ಸುವ್ಯವಸ್ಥೆಗೆ ಭಂಗ ತರಲು ಪ್ರಯತ್ನಿಸಿದವರ ಮೇಲೆ ನಾವು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳತ್ತೇವೆ ಎಂದರು. ಮಾಧ್ಯಮಗಳಲ್ಲಿ ತಾಂಬೂಲ ಪ್ರಶ್ನೆಯಂತಹ ಸುದ್ದಿಗಳನ್ನು ಹೆಚ್ಚಾಗಿ ತೋರಿಸಬೇಡಿ. ನಿಮಗೂ ಕೂಡ ಜವಾಬ್ದಾರಿ ಇರುತ್ತದೆ. ಕೆಲವರು ಪ್ರಚಾರ ಬಯಸಿ ಮಾಧ್ಯಮಗಳಲ್ಲಿ ಹೆಚ್ಚಾಗಿ ಮಾತನಾಡುತ್ತಿದ್ದಾರೆ. ಅವರ ಕವರೇಜ್ ಬಂದ್ ಮಾಡಿದ್ರೆ ಮಾರನೇ ದಿನ ಮಾತನಾಡುವುದನ್ನು ಬಂದ್ ಮಾಡುತ್ತಾರೆ. ಎಷ್ಟು ಕವರೇಜ್ ಮಾಡಬೇಕು ಅಷ್ಟು ಕವರ್ ಮಾಡುವಂತೆ ಅಲೋಕ್ ಕುಮಾರ್ ಮನವಿ ಮಾಡಿದರು.

Last Updated : Jun 4, 2022, 5:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.