ಬೆಳಗಾವಿ: ಮಹಾದಾಯಿ ಯೋಜನೆ ಜಾರಿ ವಿಚಾರದಲ್ಲಿ ಕರ್ನಾಟಕ ಕಾನೂನು ಬಾಹಿರವಾಗಿ ನಡೆದುಕೊಂಡಿದೆ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿಕೆ ನೀಡಿದ್ದಾರೆ.
ಕಾಮಗಾರಿ ಸ್ಥಳಕ್ಕೆ ಭೇಟಿ ನೀಡುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಸವಾಲಿಗೆ ಗೋವಾದಲ್ಲಿ ಮಾತನಾಡಿರುವ ಅವರು, ಮಹಾದಾಯಿ ಪ್ರದೇಶದಲ್ಲಿ ಕರ್ನಾಟಕ ಸರ್ಕಾರ ಕಾಮಗಾರಿ ಆರಂಭಿಸಿದ ಬಗ್ಗೆ ಸಾಕ್ಷ್ಯ ಕೋರ್ಟ್‌ಗೆ ಸಲ್ಲಿಸಿದ್ದೇವೆ. ಕರ್ನಾಟಕದ ಸಾಕ್ಷ್ಯಗಳು ನಮ್ಮ ಬಳಿ ಇವೆ. ಸಾಕ್ಷ್ಯಸಮೇತ ಸುಪ್ರೀಂಕೋರ್ಟ್ ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದೇವೆ ಎಂದಿದ್ದಾರೆ.
ಕರ್ನಾಟಕದ ಸಚಿವರ ಹೇಳಿಕೆಗೆ ನೇರವಾಗಿ ಒನ್ ಟು ಒನ್ ಪ್ರತಿಕ್ರಿಯೆ ನೀಡಲು ಇಷ್ಟಪಡಲ್ಲ. ಕರ್ನಾಟಕ ಸರ್ಕಾರದ ವಿರುದ್ಧ ನಾವು ಸುಪ್ರೀಂಕೋರ್ಟ್‌ಗೆ ಅಗತ್ಯ ಸಾಕ್ಷ್ಯ ಒದಗಿಸಿದ್ದೇವೆ. ಮಹದಾಯಿ ನದಿ ನೀರು ತಿರುವು ಮಾಡಿರುವ ಬಗ್ಗೆ ಸಾಕ್ಷ್ಯ ಸಲ್ಲಿಸಲಾಗಿದೆ. ಮಹದಾಯಿ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೂ ಚರ್ಚಿಸುತ್ತೇವೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.