ETV Bharat / state

ಸರ್ಕಾರದ ಸಹಾಯ ಧನ ಪಡೆಯುವಂತೆ ಡಂಗುರ ಸಾರಲಾಗುವುದು: ಕವಟಗಿಮಠ - mlc mahantesh kavatagimatta

ಸರ್ಕಾರದ ಸಹಾಯ ಧನ ಪಡೆಯಲು ಈಗಾಗಲೇ ಆನ್‌ಲೈನ್ ಮೂಲಕ‌ ಅರ್ಜಿ ಸಲ್ಲಿಸಲಾಗುತ್ತಿದೆ. ಇನ್ನುಳಿದ ಫಲಾನುಭವಿಗಳು ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಹಾಗೂ ಸರ್ಕಾರದ 5 ಸಾವಿರ ಪರಿಹಾರ ಧನ ಪಡೆಯುವಂತೆ ಗ್ರಾಮಗಳಲ್ಲಿ ಡಂಗುರ ಸಾರಲಾಗುವುದು ವಿಧಾನಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು.

We will Announcing every villages to receive government assistance
ಸರ್ಕಾರದ ಸಹಾಯ ಧನ ಪಡೆಯುವಂತೆ ಡಂಗೂರ ಸಾರಲಾಗುವುದು: ಮಹಾಂತೇಶ ಕವಟಗಿಮಠ
author img

By

Published : Jun 13, 2020, 12:21 AM IST

ಚಿಕ್ಕೋಡಿ (ಬೆಳಗಾವಿ): ಕೊರೊನಾ ಲಾಕ್​ಡೌನ್​​ ಹಿನ್ನೆಲೆಯಲ್ಲಿ ನೊಂದ ರೈತರಿಗೆ, ಕಾರ್ಮಿಕರಿಗೆ, ವಿವಿಧ ಕ್ಷೇತ್ರದಲ್ಲಿ ತೊಂದರೆ ಅನುಭವಿಸಿದ ಶ್ರಮ ಜೀವಿಗಳಿಗೆ ಸರ್ಕಾರ ಸಹಾಯ ಧನ ಘೋಷಿಸಿದೆ. ಈ ಬಗ್ಗೆ ಮಾಹಿತಿ ತಿಳಿಸುವ ನಿಟ್ಟಿನಲ್ಲಿ ಹಣ ಪಡೆಯುವಂತೆ ಗ್ರಾಮಗಳಲ್ಲಿ ಡಂಗುರ ಸಾರಲಾಗುವುದು ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು.

ಚಿಕ್ಕೋಡಿ ಪಟ್ಟಣದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಾಯ ಧನ ಪಡೆಯಲು ಈಗಾಗಲೇ ಆನ್‌ಲೈನ್ ಮೂಲಕ‌ ಅರ್ಜಿ ಸಲ್ಲಿಸಲಾಗುತ್ತಿದೆ. ಇನ್ನುಳಿದ ಫಲಾನುಭವಿಗಳು ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಹಾಗೂ ಸರ್ಕಾರದ 5 ಸಾವಿರ ಪರಿಹಾರ ಧನ ಪಡೆಯುವಂತೆ ಗ್ರಾಮಗಳಲ್ಲಿ ಡಂಗುರ ಸಾರಲಾಗುವುದು ಎಂದರು.

ಹೂವು, ಹಣ್ಣು, ತರಕಾರಿ ಬೆಳೆಗಾರರಿಗೆ ಹಾಗೂ ನೇಕಾರರಿಗೆ ಸಮ್ಮಾನ ಯೋಜನೆಯಡಿ ಸಹಾಯಧನ ನೀಡಲಾಗುತ್ತಿದೆ. ಸಾರಿಗೆ ಇಲಾಖೆಯಿಂದ ಅಟೋ, ಟ್ಯಾಕ್ಸಿ ಚಾಲಕರಿಗೆ ಸಹಾಯ ಧನ ನೀಡುತ್ತಿದ್ದು, ಅವರು ಸೇವಾ ಸಿಂಧು ಆ್ಯಪ್​​ ಮೂಲಕ ಅರ್ಜಿ ಸಲ್ಲಿಸಬೇಕೆಂದು ತಿಳಿಸಿದರು.

ಕಾರ್ಮಿಕ ಇಲಾಖೆಯಿಂದ ಕ್ಷೌರಿಕರು, ಅಗಸರು ದೃಢೀಕರಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬೇಕು. ಈ ಯೋಜನೆಯಿಂದ ಸಾಮಾನ್ಯ ಬಡವರಿಗೆ ಸಹಕಾರಿಯಾಗಲಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.