ಬೆಳಗಾವಿ: ಗಡಿ ತಿಕ್ಕಾಟ ತೀವ್ರಗೊಂಡಿದೆ. ಇದರ ಮಧ್ಯೆ ಉರಿಯೋ ಬೆಂಕಿಗೆ ತುಪ್ಪ ಸುರಿಯಲು ಮುಂದಾದ ಮಹಾರಾಷ್ಟ್ರದ ಶಿವಸೇನೆ ಉದ್ಧವ್ ಠಾಕ್ರೆ ಬಣ ಇಂದು ಸಂಜೆ 5 ಗಂಟೆಗೆ ಬೆಳಗಾವಿಯ ಕೊಗನೊಳ್ಳಿ ಚೆಕ್ಪೋಸ್ಟ್ಗೆ ಬರೋದಾಗಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಸವಾಲು ಹಾಕಿದೆ.
ಮಹಾರಾಷ್ಟ್ರ ಸಚಿವರ ಬೆಳಗಾವಿ ಪ್ರವಾಸ ರದ್ದು ಮಾಡಿದ್ದರಿಂದ ಕ್ಯಾತೆ ತೆಗೆದಿರುವ ಉದ್ಧವ್ ಠಾಕ್ರೆ ಬಣದ ಮುಖಂಡ ಹಾಗೂ ಕೊಲ್ಲಾಪುರ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ್ ದೇವಣೆ, ಕರ್ನಾಟಕ ಗಡಿ ಪ್ರವೇಶಕ್ಕೆ ಮುಂದಾಗಿದ್ದಾರೆ. ಇವರ ಈ ಹೇಳಿಕೆಯು ಗಡಿ ಪ್ರದೇಶದಲ್ಲಿ ಮತ್ತಷ್ಟು ಉದ್ವಿಗ್ನತೆಗೆ ದಾರಿ ಮಾಡಿಕೊಟ್ಟಿದೆ.
ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವರು ಎರಡೂ ಬಾರಿ ಬೆಳಗಾವಿ ಪ್ರವಾಸ ರದ್ದು ಮಾಡಿದ್ದಾರೆ. ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವದ್ವಯರ ನಿಲುವು ಸಂಶಯಾಸ್ಪದವಾಗಿದೆ. ಹೀಗಾಗಿ ಸಂಜೆ 5 ಗಂಟೆಗೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ಪೋಸ್ಟ್ಗೆ ಬರುತ್ತೇವೆ. ಟೋಲ್‌ಗೇಟ್ ಬಳಿ ಬಂದು ತನ್ನ ನಿಲುವು ತಿಳಿಸುತ್ತೇವೆ ಎಂದಿದ್ದಾರೆ.
ಇದನ್ನೂ ಓದಿ: ಬೆಳಗಾವಿ ಪ್ರವೇಶಕ್ಕೆ ಕನ್ನಡಪರ ಹೋರಾಟಗಾರರಿಗೆ ಪೊಲೀಸರ ತಡೆ.. ಗಡಿಯಲ್ಲಿ ಹೆಚ್ಚಿದ ತಿಕ್ಕಾಟ