ಬೆಳಗಾವಿ: ಮೊದಲು ಬೈ ಎಲೆಕ್ಷನ್ ಘೋಷಣೆಯಾಗಲಿ. ಬಳಿಕ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದ ಮೇಲೆ ನಾನು ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಹೇಳಿದರು.
ಬೆಳಗಾವಿ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಗಡಿ ವಿಚಾರ ಮುಗಿದು ಹೋಗಿರುವ ಅಧ್ಯಾಯ. ಪದೇ ಪದೆ ಅದನ್ನು ಪ್ರಸ್ತಾಪಿಸುವ ಅವಶ್ಯಕತೆ ಇಲ್ಲ. ಈಗಾಗಲೇ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಿ ಸಾಕಷ್ಟು ಬಾರಿ ಅಧಿವೇಶಗಳನ್ನು ಮಾಡಲಾಗಿದೆ. ಇದಲ್ಲದೇ ಮೆಡಿಕಲ್ ಕಾಲೇಜನ್ನೂ ತರೆಲಾಗಿದ್ದು, ಮಹಾರಾಷ್ಟ್ರ ಕ್ಯಾತೆ ತೆಗೆಯುತ್ತಿರುವ ಬಗ್ಗೆ ಮಾಧ್ಯಮದವರು ಪ್ರಸಾರದ ಜೊತೆಗೆ ಮಹತ್ವ ಕೊಡುವುದನ್ನು ನಿಲ್ಲಿಸಬೇಕು ಎಂದರು.