ETV Bharat / state

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ : ಕಾಲಮಿತಿಯಲ್ಲಿ ಸಿದ್ಧತೆ ಪೂರ್ಣಗೊಳಿಸಲು ಸೂಚನೆ - belguam

ಅಧಿವೇಶನದ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪೂರ್ವಸಿದ್ಧತೆ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಚಳಿಗಾಲ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ವಸತಿ, ಊಟೋಪಹಾರ ಹಾಗೂ ಸಾರಿಗೆ ಮತ್ತಿತರ ವ್ಯವಸ್ಥೆಯನ್ನು ನಿಗದಿತ ಸಮಯದಲ್ಲಿ ಸಮರ್ಪಕವಾಗಿ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು..

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ
ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ
author img

By

Published : Nov 27, 2021, 10:44 PM IST

ಬೆಳಗಾವಿ : ಡಿಸೆಂಬರ್‌ನಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.

ವಸತಿ, ಊಟೋಪಹಾರ ಹಾಗೂ ಸಾರಿಗೆ ಮತ್ತಿತರ ವ್ಯವಸ್ಥೆಯನ್ನು ನಿಗದಿತ ಸಮಯದಲ್ಲಿ ಸಮರ್ಪಕವಾಗಿ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೂಚನೆ ನೀಡಿದರು.

ಅಧಿವೇಶನದ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಧಿವೇಶನದಲ್ಲಿ ಭಾಗವಹಿಸುವ ಎಲ್ಲ ಸಚಿವರು, ಉನ್ನತ ಅಧಿಕಾರಿಗಳಿಗೆ ಶಿಷ್ಟಾಚಾರದ ಪ್ರಕಾರ ಅವರಿಗೆ ವಸತಿ ಹಾಗೂ ವಾಹನ ವ್ಯವಸ್ಥೆಯನ್ನು ಮಾಡಬೇಕು.

ಸುವರ್ಣ ಗಾರ್ಡನ್ ಮತ್ತಿತರ ಕಡೆಗಳಲ್ಲಿ ನಿಗದಿಪಡಿಸಲಾಗಿರುವ ಪ್ರತಿಭಟನಾ ಸ್ಥಳದಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ. ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಕುಡಿಯುವ ನೀರು, ಶೌಚಾಲಯ ಮತ್ತಿತರ ಮೂಲಸೌಕರ್ಯಗಳನ್ನು ಒದಗಿಸಬೇಕು.

ಪ್ರತಿಭಟನೆ ವೇಳೆ ಹೆದ್ದಾರಿಯಲ್ಲಿ ರಸ್ತೆ ತಡೆಯಾದರೆ ಸಂಚಾರ ಅಸ್ತವ್ಯಸ್ತವಾಗಲಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಮುಂಚಿತವಾಗಿಯೇ ಮಾಹಿತಿಯನ್ನು ಸಂಗ್ರಹಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರೇಕ್ಷಕರ ಗ್ಯಾಲರಿಯಲ್ಲಿ ಸಾರ್ವಜನಿಕರಿಗೆ ಯಾವ ರೀತಿ ಅವಕಾಶ ಕಲ್ಪಿಸಬಹುದು ಮತ್ತು ಕೋವಿಡ್ ಮಾರ್ಗಸೂಚಿ ಪಾಲಿಸುವುದಕ್ಕೆ ಸಂಬಂಧಿಸಿದಂತೆ ಮಾನ್ಯ ವಿಧಾನಸಭಾ ಅಧ್ಯಕ್ಷರು ಹಾಗೂ ಮಾನ್ಯ ಸಭಾಪತಿಯವರ ಜತೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮೂಲಸೌಕರ್ಯ ‌ಒದಗಿಸಲು ನಿರ್ದೇಶನ : ಬೆಂಗಳೂರಿನ ವಿಧಾನಸೌಧದಲ್ಲಿ ಸಂಪೂರ್ಣ ಇ-ಆಫೀಸ್ ವ್ಯವಸ್ಥೆ ಜಾರಿಯಲ್ಲಿದೆ. ಆದ್ದರಿಂದ ಅಧಿವೇಶನ ವೇಳೆ ಸುವರ್ಣ ವಿಧಾನಸೌಧದಲ್ಲಿ ಕೂಡ ಇ-ಆಫೀಸ್ ಕಾರ್ಯನಿರ್ವಹಣೆಗೆ ಅಗತ್ಯವಿರುವ ಕೆಸ್ವಾನ್, ಅಂತರ್ಜಾಲ ಸಂಪರ್ಕ, ಕಂಪ್ಯೂಟರ್ ಮತ್ತಿತರ ಅತ್ಯಾಧುನಿಕ ತಾಂತ್ರಿಕ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಅತೀಕ್ ನಿರ್ದೇಶನ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.