ETV Bharat / state

ಅಧಿವೇಶನ ಪೂರ್ವಸಿದ್ಧತೆ ಸಭೆ: ವಸತಿ, ಸಾರಿಗೆ, ಊಟೋಪಹಾರ ವ್ಯವಸ್ಥೆ ಕುರಿತು ಚರ್ಚೆ - Winter Session in belgavi

ಡಿಸೆಂಬರ್​​ನಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪೂರ್ವಸಿದ್ಧತೆ ಕುರಿತು ಮಂಗಳವಾರ ಸಭೆ ನಡೆಸಲಾಯ್ತು.

Winter Session Preparatory Meeting
ಅಧಿವೇಶನ ಪೂರ್ವಸಿದ್ಧತೆ ಸಭೆ
author img

By

Published : Nov 23, 2021, 10:37 PM IST

ಬೆಳಗಾವಿ: ಡಿಸೆಂಬರ್​ನಲ್ಲಿ ನಡೆಯಲಿರುವ ವಿಧಾನಮಂಡಲದ ಅಧಿವೇಶನವನ್ನು ಕೋವಿಡ್ ಮಾರ್ಗಸೂಚಿ ಪಾಲನೆಯ ಜತೆಗೆ ವಸತಿ, ಸಾರಿಗೆ ಹಾಗೂ ಊಟೋಪಹಾರ ಸೇರಿದಂತೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಅಚ್ಚುಕಟ್ಟಾಗಿ ಮಾಡಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಸೂಚನೆ ನೀಡಿದರು.

Winter Session Preparatory Meeting

ಡಿಸೆಂಬರ್​​ನಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪೂರ್ವಸಿದ್ಧತೆ ಕುರಿತು ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಲಾಕ್​​ಡೌನ್ ಬಳಿಕ ಬಹುತೇಕ ಅತಿಥಿಗೃಹಗಳು, ಹೋಟೆಲ್ ಮತ್ತಿತರ ಕಡೆಗಳಲ್ಲಿ ಕೊಠಡಿಗಳು ಹೆಚ್ಚಿನ ಬಳಕೆ ಆಗಿರುವುದಿಲ್ಲ. ಆದ್ದರಿಂದ ಪ್ರತಿಯೊಂದನ್ನು ಪರಿಶೀಲಿಸಿ ಸ್ವಚ್ಛತೆ ಮತ್ತು ಸ್ಯಾನಿಟೈಜೇಷನ್ ಕೆಲಸ ಆರಂಭಿಸಬೇಕು. ವಸತಿಗೆ ಸಂಬಂಧಿಸಿದಂತೆ ಕಳೆದ ಅಧಿವೇಶನಗಳ ಸಂದರ್ಭದಲ್ಲಿ ಎದುರಾಗಿರುವ ಅನಾನುಕೂಲತೆಗಳನ್ನು ಆಧರಿಸಿ ಅವುಗಳನ್ನು ನಿವಾರಿಸಲು ಮುಂಚಿತವಾಗಿ ಕ್ರಮ ಕೈಗೊಳ್ಳಬೇಕು.

Winter Session Preparatory Meeting

ಸುರಕ್ಷತಾ ಕ್ರಮಗಳು, ಪಾರ್ಕಿಂಗ್ ವ್ಯವಸ್ಥೆ, ಮೊಬೈಲ್ ಹಾಗೂ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರು, ತುರ್ತು ವೈದ್ಯಕೀಯ ಸೌಲಭ್ಯಗಳ ಬಗ್ಗೆಯೂ ಸಂಬಂಧಿಸಿದ ಅಧಿಕಾರಿಗಳು ಪೂರ್ವಭಾವಿ ಸಭೆಗಳನ್ನು ನಡೆಸಿ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.

ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರಕಾರದ ಮಾರ್ಗಸೂಚಿ ಪಾಲಿಸುವುದರೊಂದಿಗೆ ಅಧಿವೇಶನ ನಡೆಸಬೇಕಿದೆ.ಅಗತ್ಯ ಮಾಸ್ಕ್, ಸ್ಯಾನಿಟೈಸರ್ ಒದಗಿಸವುದರ ಜತೆಗೆ ಸುರಕ್ಷಿತ ಅಂತರ ಕಾಪಾಡುವುದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ವಿವಿಧ ಸಮಿತಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಮಯದ ಅಭಾವದ ಜತೆಗೆ ಚುನಾವಣೆ ಕೂಡ ನಡೆಯುತ್ತಿರುವುದರಿಂದ ಸಾರಿಗೆ, ವಸತಿ, ಶಿಷ್ಟಾಚಾರ ಪಾಲನೆ, ಊಟೋಪಹಾರ ಮತ್ತಿತರ ಸಿದ್ಧತೆಗಳನ್ನು ತುರ್ತಾಗಿ ಮಾಡಿಕೊಳ್ಳುವ ಕುರಿತು ಅಧಿಕಾರಿಗಳ ಜತೆ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅವರು ಕೂಲಂಕಷವಾಗಿ ಚರ್ಚೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಅಧಿವೇಶನದ ವಿಶೇಷ ಅಧಿಕಾರಿ ಡಾ.ಸುರೇಶ್ ಇಟ್ನಾಳ, ಹಿಂದೆ ನಡೆದಿರುವ ಅಧಿವೇಶನದಲ್ಲಿ ಉಂಟಾಗಿರುವ ಕೆಲ ಅನಾನುಕೂಲಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.