ಅಥಣಿ: ಗಂಡನ ಕುಡಿತದ ಚಟಕ್ಕೆ ಬೇಸತ್ತು ಗೃಹಿಣಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಥಣಿ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಸಂಭವಿಸಿದೆ.
ಪ್ರಿಯಾಂಕಾ ಅಟಪಟಕರ (25) ಆತ್ಮಹತ್ಯೆಗೆ ಶರಣಾದರು ಮಹಿಳೆ. ಪತಿಗೆ ಮದ್ಯ ಸೇವನೆ ಬಿಡುವಂತೆ ಹಲವಾರು ಬಾರಿ ಮನವಿ ಮಾಡಿಕೊಂಡರು ಸಹ ಆತ ಬಿಡದಿದ್ದ ಕಾರಣ ಮಹಿಳೆ ಮನನೊಂದು ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಗುರುವಾರ ಈ ಘಟನೆ ಸಂಭವಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.