ಬೆಳಗಾವಿ: ಕಳೆದ ನಾಲ್ಕು ದಶಕಗಳಿಂದ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಮಾಡದ ಹಿನ್ನೆಲೆ ರಾಮದುರ್ಗ ಬಿಜೆಪಿ ಶಾಸಕ ಮಹಾದೇವಪ್ಪ ಯಾದವಾಡ ಅವರನ್ನು ಮಹಿಳೆಯರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಮಹಿಳೆಯರ ತರಾಟೆ ತೆಗೆದುಕೊಂಡ ಹಿನ್ನೆಲೆ ಶಾಸಕರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ರಾಮದುರ್ಗ ತಾಲೂಕಿನಲ್ಲಿ ನಾಲ್ಕು ದಶಕ ಕಳೆದರೂ ರಸ್ತೆ ಅಭಿವೃದ್ಧಿಗೊಂಡಿಲ್ಲ. ಇದರಿಂದ ಕೊಚ್ಚಿಗೆದ್ದ ಮಹಿಳೆಯರು ಬಿಜೆಪಿ ಶಾಸಕ ಮಹಾದೇವಪ್ಪ ಯಾದವಾಡಗೆ ತರಾಟೆಗೆ ತೆಗೆದುಕೊಂಡರು. ಈ ಘಟನೆ ರಾಮದುರ್ಗ ತಾಲೂಕಿನ ಚಿಕೊಪ್ಪ ಕೆಎಸ್ ಗ್ರಾಮದಲ್ಲಿ ನಡೆದಿದೆ.
ರಸ್ತೆ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆಗೆಂದು ಶಾಸಕ ಮಹಾದೇವಪ್ಪ ಯಾದವಾಡ ಚಿಕ್ಕೊಪ್ಪ ಗ್ರಾಮಕ್ಕೆ ಆಗಮಿಸಿದ್ದರು. ಚಿಕೊಪ್ಪ ಕೆಎಸ್ ಗ್ರಾಮದಲ್ಲಿ 10 ಲಕ್ಷ ವೆಚ್ಚದ ರಸ್ತೆ ಕಾಮಗಾರಿ ಚಾಲನೆಗೆ ಶಾಸಕ ಯಾದವಾಡ ಬಂದಿದ್ದರು. ಈ ವೇಳೆ, ಪಕ್ಕದ ಬಡಾವಣೆ ನಿವಾಸಿಗಳಿಂದ ಶಾಸಕ ಯಾದವಾಡಗೆ ತರಾಟೆಗೆ ತೆಗೆದುಕೊಂಡರು. ನಮ್ಮ ಕಾಲೋನಿಯ ರಸ್ತೆ ಅಭಿವೃದ್ಧಿ ಪಡಿಸುವಂತೆ ಮಹಿಳೆಯರು ಪಟ್ಟುಹಿಡಿದರು.
40 ವರ್ಷಗಳಿಂದ ಮನವಿ ಸಲ್ಲಿಸಿದರೂ ರಸ್ತೆ ಅಭಿವೃದ್ಧಿ ಆಗ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿದರು. ಈ ವೇಳೆ, ಮಹಾದೇವಪ್ಪ ಯಾದವಾಡ ಸ್ಥಳದಿಂದ ಕಾಲ್ಕಿತ್ತರು. ಬಳಿಕ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಫೋನ್ ಮಾಡಿ ರಸ್ತೆ ಅಭಿವೃದ್ಧಿಗೆ ಯೋಜನೆ ರೂಪಿಸುವಂತೆ ಸೂಚನೆ ನೀಡಿದರು.
ಓದಿ: ಬಿಜೆಪಿಯವರಿಗೆ ಮಾನ ಮರ್ಯಾದೆ ಇದೆಯೇನ್ರಿ: ವಿಪಕ್ಷ ನಾಯಕ ಸಿದ್ದರಾಮಯ್ಯ ತರಾಟೆ