ಚಿಕ್ಕೋಡಿ: ಕೊರೊನಾ ಸೋಂಕು ತಡೆಗೆ ದೇಶಾದ್ಯಂತ ಲಾಕ್‌ಡೌನ್ ಜಾರಿಯಲ್ಲಿದ್ದು, ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ನರೇಗಾ ಯೋಜನೆ ಅಡಿಯ ಕೂಲಿ ಕಾರ್ಮಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೆಲಸದಲ್ಲಿ ತೊಡಗಿದ್ದರು ಎಂಬ ಆರೋಪ ಕೇಳಿಬಂದಿದೆ.
ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿ ಕಾಮಗಾರಿ ಆರಂಭಿಸಲಾಗಿದೆ. ಕಾರ್ಮಿಕರಲ್ಲಿ ಯಾವುದೇ ಸಾಮಾಜಿಕ ಅಂತರ ಇಲ್ಲದೆ, ಮುಂಜಾಗ್ರತಾ ಕ್ರಮಗಳು ತೆಗೆದುಕೊಳ್ಳದೆ ಕಾಮಗಾರಿ ನಡೆಸುತ್ತಿರುವುದು ಎಷ್ಟು ಸರಿ ಎಂದು ಪಿಡಿಓ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.