ಚಿಕ್ಕೋಡಿ: ಡಿ.16ರಂದು ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಭರಮಾ ಧುಪದಾಳೆ ತನ್ನ ಗೆಳೆಯರೊಂದಿಗೆ ಮಾತನಾಡುತ್ತ ಕುಳಿತಾಗ ಗುಂಡಿನ ದಾಳಿ ನಡೆದಿತ್ತು. ಈ ದಾಳಿಗೆ ಸಂಬಂಧಿಸಿದ 3ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಗಡಹಿಂಗ್ಲಂಜ ತಾಲ್ಲೂಕಿನ ಮುತ್ನಾಳ ಗ್ರಾಮದ ಯುವರಾಜ ಸುರ್ಯಾಜಿ ನಾಯಿಕ ಬಂಧಿತ ಆರೋಪಿ. ಬಂಧಿತನಿಂದ ಎರಡು ನಾಡ ಪಿಸ್ತೂಲ್, ಒಂದು ಖಾಲಿ ಮ್ಯಾಗಜಿನ್, ಎರಡು ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ
ಓದಿ: ಬೆಳಗಾವಿ: ಗುಂಡು ಹಾರಿಸಿ ವ್ಯಕ್ತಿಯ ಕೊಲೆ ಯತ್ನ
ಈ ಪ್ರಕರಣ ಭೇದಿಸಲು ಬೆಳಗಾವಿ ಎಸ್ಪಿ ಲಕ್ಷ್ಮಣ್ ನಿಂಬರಗಿ ಅವರು ಗೋಕಾಕ ಮತ್ತು ಹುಕ್ಕೇರಿ ಸಿಪಿಐ ನೇತೃತ್ವದಲ್ಲಿ ತಂಡ ರಚನೆ ಮಾಡಿದ್ದರು. ಕಳೆದ 20 ದಿನದಲ್ಲಿ ಇಬ್ಬರು ಆರೋಪಿತರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಗುಂಡಿನ ಸತ್ಯ ಬಾಯ್ಬಿಬಿಟ್ಟಿದ್ದಾರೆ ಎನ್ನಲಾಗ್ತಿದೆ.
ಓದಿ: ಯಮಕನಮರಡಿ ಗ್ರಾಮದಲ್ಲಿ ಗುಂಡಿನ ದಾಳಿ ಪ್ರಕರಣ: ಆರೋಪಿಯ ಬಂಧನ
ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.