ಬೆಳಗಾವಿ: ಬಿಮ್ಸ್ ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಮತ್ತೋರ್ವ ಯುವತಿ ಬಳಲಿ ಮೃತಪಟ್ಟ ಘಟನೆ ಇಂದು ನಡೆದಿದೆ.
ಕಾಗವಾಡ ತಾಲೂಕಿನ ಗ್ರಾಮವೊಂದರ 30 ವರ್ಷದ ಯುವತಿ ಮೃತಪಟ್ಟಿದ್ದು, ಆಕೆಯ ಕೊನೆ ಘಳಿಗೆಯ ಮನಕಲಕುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಯುವತಿ ಸಾವಿಗೆ ಬಿಮ್ಸ್ ಆಸ್ಪತ್ರೆಯ ನಿರ್ಲಕ್ಷ್ಯವೇ ಕಾರಣ ಎನ್ನಲಾಗುತ್ತಿದೆ.
ಯುವತಿ ಮಧುಮೇಹದಿಂದ ಬಳಲುತ್ತಿದ್ದಳು. ಹೀಗಾಗಿ ಕೆಲ ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗಳಿಗೆ ಸೇರಿಸಲು ಸಾಕಷ್ಟು ಅಲೆದಾಡಿದರೂ ಚಿಕಿತ್ಸೆ ಸಿಗದೆ ಕುಟುಂಬಸ್ಥರು ಅನಿವಾರ್ಯವಾಗಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ವರದಿ ಪಾಸಿಟಿವ್ ಬಂದಿತ್ತು. ಹೀಗಾಗಿ ಆಕೆಯನ್ನು ಕೋವಿಡ್ ವಾರ್ಡ್‌ಗೆ ಶಿಫ್ಟ್ ಮಾಡಲಾಗಿತ್ತು. ಆದ್ರೆ ವೈದ್ಯರು ಸೂಕ್ತ ಚಿಕಿತ್ಸೆ ನೀಡಿಲ್ಲ. ಹೀಗಾಗಿ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ.
ಖಾಸಗಿ ಆಸ್ಪತ್ರೆಗಳು ಚಿಕಿತ್ಸೆಗೆ ದಾಖಲಿಸಿಕೊಂಡಿದ್ದರೆ ನನ್ನ ಮಗಳು ಬದುಕುಳಿಯುತ್ತಿದ್ದಳು. ಬಿಮ್ಸ್ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಸಿಕ್ಕಿಲ್ಲ. ಮುದ್ದಾಗಿ ಬೆಳೆಸಿದ ಮಗಳ ಅಂತ್ಯಕ್ರಿಯೆ ಮಾಡಲು ನಮ್ಮಿಂದ ಸಾಧ್ಯವಾಗುತ್ತಿಲ್ಲ ಎಂದು ಮೃತ ಯುವತಿಯ ತಂದೆ ಹೇಳಿದರು.