ETV Bharat / state

ಅಕ್ಕಿಗಾಗಿ ಕೇಂದ್ರದ ವಿರುದ್ಧ ಬೆಳಗಾವಿಯಲ್ಲಿ ಬೀದಿಗಿಳಿದ ಯುವ ಕಾಂಗ್ರೆಸ್

ಬೆಲೆ ಏರಿಕೆಯಿಂದ ಸಂಕಷ್ಟದ ಸ್ಥಿತಿ ನಿರ್ಮಾಣವಾಗಿದ್ದರೂ ರಾಜ್ಯದ ಜನರ ನೆರವಿಗೆ ಕೇಂದ್ರ ಸರ್ಕಾರ ಬರುತ್ತಿಲ್ಲ ಎಂದು ಕಾಂಗ್ರೆಸ್​ ಯುವ ಘಟಕದ ಜಿಲ್ಲಾಧ್ಯಕ್ಷ ಕಾರ್ತಿಕ ಪಾಟೀಲ್ ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಬೀದಿಗಿಳಿದ ಯುವ ಕಾಂಗ್ರೆಸ್
ಬೆಳಗಾವಿಯಲ್ಲಿ ಬೀದಿಗಿಳಿದ ಯುವ ಕಾಂಗ್ರೆಸ್
author img

By

Published : Jul 5, 2023, 4:00 PM IST

ಕಾಂಗ್ರೆಸ್​ ಯುವ ಘಟಕದ ಜಿಲ್ಲಾಧ್ಯಕ್ಷ ಕಾರ್ತಿಕ್ ಪಾಟೀಲ

ಬೆಳಗಾವಿ : ಅಕ್ಕಿ ವಿತರಣೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಇಂದು ಧರಣಿ ನಡೆಸಿದರು.

ಕಾಂಗ್ರೆಸ್ ಯುವ ಘಟಕದ ಜಿಲ್ಲಾಧ್ಯಕ್ಷ ಕಾರ್ತಿಕ ಪಾಟೀಲ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅನ್ನಭಾಗ್ಯಕ್ಕೆ ಕನ್ನ ಹಾಕಿರುವ ಬಿಜೆಪಿಗೆ ಧಿಕ್ಕಾರ, ಮೋದಿ ಹಟಾವ್ ದೇಶ ಬಚಾವ್, ಬೇಕೆ ಬೇಕು ಅಕ್ಕಿ ಬೇಕು ಎಂದು ಘೋಷಣೆ ಕೂಗಿದ ಕೈ ಕಾರ್ಯಕರ್ತರು ಕಾಡಾ ಕಚೇರಿ ಬಳಿಯ ಸಂಸದೆ ಮಂಗಲಾ ಅಂಗಡಿ ಅವರ ಕಚೇರಿ ಮುಂದೆ ಕೆಲ ಕಾಲ ಧರಣಿ ಕುಳಿತರು.

ಧ್ವನಿ ಎತ್ತಬೇಕಾದ ಸಂಸದರು ಮೌನ ವಹಿಸಿದ್ದಾರೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಕೇಂದ್ರ ಸರ್ಕಾರ ನಮಗೆ ಸಿಗಬೇಕಾದ ಅಕ್ಕಿ ಕೊಡುತ್ತಿಲ್ಲ. ರಾಜ್ಯದ ಪರವಾಗಿ ಧ್ವನಿ ಎತ್ತಬೇಕಾದ ಸಂಸದರು ಮೌನ ವಹಿಸಿದ್ದಾರೆ. ನಮ್ಮ ರಾಜ್ಯಕ್ಕೆ ಅಕ್ಕಿ ಕೊಡಿ ಎಂದು ಯಾವ ಬಿಜೆಪಿ‌ ನಾಯಕರು ಪ್ರಧಾನಿ ಮೋದಿ ಮುಂದೆ ಕೇಳುವ ಧೈರ್ಯ ಮಾಡದೇ ಇರುವುದು ರಾಜ್ಯದ ದೊಡ್ಡ ದುರಂತ ಎಂದು ಕೈ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ: ಇದೇ ವೇಳೆ ಮಾತನಾಡಿದ ಕಾರ್ತಿಕ ಪಾಟೀಲ, ಅಕ್ಕಿ ವಿತರಣೆಯಲ್ಲಿ ಕೇಂದ್ರದ ತಾರತಮ್ಯ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದೇವೆ. ಸಾಕಷ್ಟು ಅಕ್ಕಿ ದಾಸ್ತಾನು ಇದ್ದರೂ ರಾಜ್ಯಕ್ಕೆ ವಿತರಣೆ ಮಾಡುತ್ತಿಲ್ಲ. ದುಡ್ಡು ಕೊಡುತ್ತೇವೆ ಎಂದರೂ ಕೊಡದೇ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ಈ ಮೂಲಕ ಬಡವರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ. ಮಳೆಯಾಗುತ್ತಿಲ್ಲ, ಬೆಲೆ ಏರಿಕೆಯಿಂದ ಸಂಕಷ್ಟದ ಸ್ಥಿತಿ ನಿರ್ಮಾಣ ಆಗಿದ್ದರೂ, ರಾಜ್ಯದ ಜನರ ನೆರವಿಗೆ ಕೇಂದ್ರ ಸರ್ಕಾರ ಬರುತ್ತಿಲ್ಲ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭಂಟಿ ಶೇಳಕೆ, ಶಂಭುರಾಜೆ ದೇಸಾಯಿ, ಅಬ್ದುಲ್ ದೇಸಾಯಿ, ಯಲ್ಲಪ್ಪ ಶಿಂಗೆ, ಅಕೀಫ್ ಬೇಪಾರಿ ಸೇರಿ ಮತ್ತಿತರರು ಭಾಗಿಯಾಗಿದ್ದರು.

ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ: ಇನ್ನೊಂದೆಡೆ ಸಂಸದ ಬಿ. ವೈ ರಾಘವೇಂದ್ರ ಅವರ ಶಿವಮೊಗ್ಗದ ಮನೆ ಮುತ್ತಿಗೆ ಹಾಕಲು ಯತ್ನಿಸಿದ‌ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಮೇಲೆ ಮಲತಾಯಿ ಧೋರಣೆ ತೋರುತ್ತಿದೆ‌ ಎಂದು ಆರೋಪಿಸಿ ಇಂದು ರಾಜ್ಯಾದ್ಯಂತ ಯುವ ಕಾಂಗ್ರೆಸ್ ಕಾರ್ಯಕರ್ತರು ಸಂಸದರ ಮನೆ ಮುತ್ತಿಗೆ ಹಾಕುವ ಪ್ರತಿಭಟನೆ ಆಯೋಜಿಸಿದ್ದಾರೆ.

ಜಿಲ್ಲೆಯ ಯುವ ಕಾಂಗ್ರೆಸ್ ಕಾರ್ಯಕರ್ತರು ವಿನೋಬನಗರದ ಪೊಲೀಸ್ ಚೌಕಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯ ನಂತರ ಯುವ ವಿನೋಬ ನಗರದಲ್ಲಿರುವ ಸಂಸದರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ, ಮುಂಜಾಗ್ರತ ಕ್ರಮವಾಗಿ ಪೊಲೀಸರು ಸಂಸದರ ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಬ್ಯಾರಿಕೇಡ್​ ಅಳವಡಿಸಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು. ಯುವ ಕಾಂಗ್ರೆಸ್ ಕಾರ್ಯಕರ್ತರು ಬ್ಯಾರಿಕೇಡ್​ ನೂಕಿ ಮುಂದೆ ಹೋಗಲು ಪ್ರಯತ್ನಿಸಿದರು.‌

ಈ ವೇಳೆ ಪೊಲೀಸರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದರು. ಆದರೂ ಯುವ ಕಾಂಗ್ರೆಸ್ ಕಾರ್ಯಕರ್ತರು ಬಂಧನಕ್ಕೆ ವಿರೋಧ ವ್ಯಕ್ತಪಡಿಸಿದರು. ಆಗ ಪೊಲೀಸರು ಎಲ್ಲರನ್ನು ಬಂಧಿಸಿ ತಮ್ಮ ವಾಹನದಲ್ಲಿ ಕರೆದುಕೊಂಡು ಹೋದರು. ಈ ವೇಳೆ ಪೊಲೀಸರು ಸುಮಾರು 60ಕ್ಕೂ ಹೆಚ್ಚು‌ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ ಡಿಎಆರ್ ಮೈದಾನಕ್ಕೆ ಕರೆದೊಯ್ದರು.

ಇದನ್ನೂ ಓದಿ: Youth Congress protest: ಸಂಸದರ ಮನೆ ಮುತ್ತಿಗೆ ಯತ್ನ.. ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.