ಚಿಕ್ಕೋಡಿ: ಅಪ್ರಾಪ್ತ ಬಾಲಕಿಯ ಜೊತೆ ತೆಗೆಸಿಕೊಂಡಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಯುವಕನನ್ನು ಮೂಡಲಗಿ ಪಟ್ಟಣ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೂಡಲಗಿ ಪಟ್ಟಣದ ಶ್ರೀಕಾಂತ ಶಂಕರ ನಾಯಕ (23) ಹಾಗೂ 17 ವರ್ಷದ ಯುವತಿ ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆಕೆಯ ಜೊತೆ ಸುತ್ತಾಡಿ ಫೋಟೋಗಳನ್ನು ತೆಗೆದುಕೊಂಡಿದ್ದ ಆರೋಪಿ, ಬಾಲಕಿಯನ್ನು ಮತ್ತೆ ಭೇಟಿಯಾಗಲು ಕರೆದಾಗ ಬಾಲಕಿ ಬರಲು ನಿರಾಕರಿಸಿದ್ದಾಳೆ. ಇದರಿಂದ ಕುಪಿತಗೊಂಡ ಆತ, ಆಕೆಯ ಜೊತೆ ಇರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾನೆ. ಈ ಹಿನ್ನಲೆಯಲ್ಲಿ ಬಾಲಕಿಯ ಪೋಷಕರು ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಮೂಡಲಗಿ ಪಿಎಸ್ಐ ಎಚ್. ವೈ. ಬಲದಂಡಿ ಮಾಹಿತಿ ನೀಡಿದ್ದಾರೆ.