ETV Bharat / state

ಬಳ್ಳಾರಿಯಲ್ಲಿ ಕೊರೊನಾ ಗೆದ್ದು ಬಂದ 12 ಮಂದಿಗೆ ಬೀಳ್ಕೊಡುಗೆ

ಸೋಂಕಿನಿಂದ 12 ಜನರು ಗುಣಮುಖರಾಗಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ನಿನ್ನೆ ಸಂಜೆ ಅವರನ್ನು ಬಿಡುಗಡೆ ಮಾಡಲಾಯಿತು‌. ಇದುವರೆಗೆ 112 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದು, 302 ಪ್ರಕರಣಗಳು ಸಕ್ರಿಯವಾಗಿವೆ.

People who are recovered from corona
People who are recovered from corona
author img

By

Published : Jun 21, 2020, 1:50 AM IST

ಬಳ್ಳಾರಿ: ಮಹಾಮಾರಿ ಕೊರೊನಾ ಸೋಂಕಿನಿಂದ 12 ಜನರು ಗುಣಮುಖರಾಗಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ನಿನ್ನೆ ಸಂಜೆ ಅವರನ್ನು ಬಿಡುಗಡೆ ಮಾಡಲಾಯಿತು‌.

ಜಿಲ್ಲೆಯಲ್ಲಿಂದು 14 ಹೊಸ ಪ್ರಕರಣಗಳು ಸೇರಿದಂತೆ, ಸೋಂಕಿತರ ಸಂಖ್ಯೆ 416ಕ್ಕೆ ಏರಿಕೆಯಾಗಿದೆ. ಇದುವರೆಗೆ 112 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದು, 302 ಪ್ರಕರಣಗಳು ಸಕ್ರಿಯವಾಗಿವೆ. ಇನ್ನೂ ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಗುಣಮುಖರಾಗಿ ಮನೆಯತ್ತ ತೆರಳಲು ಸಿದ್ಧರಾಗಿ ನಿಂತಿದ್ದವರಿಗೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಹೂಗುಚ್ಛ, ಹಣ್ಣು-ಹಂಪಲು ನೀಡಿ ಚಪ್ಪಾಳೆ ತಟ್ಟಿ ಅಭಿನಂದಿಸಿದರು. ಜೊತೆಗೆ ಕಂದಾಯ ಇಲಾಖೆ ವತಿಯಿಂದ ನೀಡಲಾಗುವ ಪಡಿತರ ಕಿಟ್ ಕಳುಹಿಸಿಕೊಡಲಾಯಿತು.

ಈ ಸಂದರ್ಭದಲ್ಲಿ ಕೋವಿಡ್ ನೋಡಲ್ ಅಧಿಕಾರಿ ಡಾ.ದೈವಿಕ್, ಹಿರಿಯ ತಜ್ಞರಾದ ಡಾ.ಪ್ರಕಾಶ್ ಭಾಗವತಿ, ಡಾ.ಉದಯ್ ಶಂಕರ್, ಡಾ.ಮದು ಜುಮ್ಲ, ಶುಶ್ರೂಷಾ ಅಧೀಕ್ಷಕಿ ಶಾಂತಾಬಾಯಿ, ಡಾ.ಚಿತ್ರಶೇಖರ ಸೇರಿದಂತೆ ಲ್ಯಾಬ್ ಟೆಕ್ನಿಷಿಯನ್ಸ್, ಎಕ್ಸ್-ರೇ, ಡಿ-ಗ್ರೂಪ್ ಸಿಬ್ಬಂದಿ ಸೇರಿದಂತೆ ಆಸ್ಪತ್ರೆಯ ಇತರ ಸಿಬ್ಬಂದಿ ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.