ETV Bharat / state

ಬಳ್ಳಾರಿ; ಒಂದೇ ದಿನ 135 ಮಂದಿಗೆ ಸೋಂಕು ದೃಢ

author img

By

Published : Jul 22, 2020, 5:34 PM IST

135 ಜನರಿಗೆ ಇಂದು ಕೊರೊನಾ ಸೋಂಕು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 2945ಕ್ಕೆ ಏರಿಕೆಯಾಗಿದೆ. ಹಾಗೆಯೇ 39 ಮಂದಿ ಗುಣಮುಖರಾಗಿ ಮನೆ ಸೇರಿದ್ದಾರೆ.

Ballary corona case
Ballary corona case

ಬಳ್ಳಾರಿ: ಗಣಿ ಜಿಲ್ಲೆಯಲ್ಲಿಂದು ಹೊಸದಾಗಿ 135 ಕೊರೊನಾ ಪಾಸಿಟಿವ್ ಕೇಸ್​ಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2945ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ದಿನೇ-ದಿನೆ ಸೋಂಕು ಹೆಚ್ಚಾಗಿ ಹರಡುತ್ತಿದ್ದು, ಇಂದು ಒಂದೇ ದಿನ 135 ಮಂದಿಗೆ ಈ ಮಹಾಮಾರಿ ಕೊರೊನಾ ಸೋಂಕು ತಗುಲಿರುವುದು ಧೃಡಪಟ್ಟಿದೆ. ಕೇವಲ ಜಿಂದಾಲ್ ಒಂದರಲ್ಲೇ ಈವರೆಗೆ 643 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2945ಕ್ಕೇರಿಕೆಯಾಗಿದ್ದು, ಈ ಪೈಕಿ 1436 ಮಂದಿ ಗುಣಮುಖರಾಗಿದ್ದಾರೆ. 62 ಮಂದಿ ಸಾವನ್ನಪ್ಪಿದ್ದು, ಸದ್ಯ 1447 ಸಕ್ರಿಯ ಪ್ರಕರಣಗಳಿವೆ. ಇಂದು 39 ಮಂದಿ ಸೋಂಕಿನಿಂದ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.