ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 136 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3245ಕ್ಕೇರಿಕೆಯಾಗಿದೆ ಮತ್ತು ಇಬ್ಬರು ಬಲಿಯಾಗಿದ್ದಾರೆ.
ಇಂದು ಒಂದೇ ದಿನ 136 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 3245ಕ್ಕೆ ತಲುಪಿದೆ. ಈ ಪೈಕಿ 1525 ಮಂದಿ ಗುಣಮುಖರಾಗಿದ್ದಾರೆ. 69 ಮಂದಿ ಸಾವನ್ನಪ್ಪಿದ್ದು, ಸದ್ಯ 1651 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.
ಇಂದು ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. 53 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಇಂದು ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.