ETV Bharat / state

ಬಳ್ಳಾರಿಯಲ್ಲಿ 150ನೇ ಗಾಂಧಿ ಜಯಂತಿ ಆಚರಣೆ

author img

By

Published : Oct 2, 2019, 11:49 PM IST

ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಾತ್ಮ ಗಾಂಧೀಜಿ ಅವರ 150ನೇ ಜಯಂತಿ ಆಚರಿಸಲಾಯಿತು.

ಬಳ್ಳಾರಿಯಲ್ಲಿ 150ನೇ ಗಾಂಧಿ ಜಯಂತಿ ಆಚರಣೆ

ಬಳ್ಳಾರಿ: ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಾತ್ಮ ಗಾಂಧೀಜಿ ಅವರ 150ನೇ ಜಯಂತಿ ಆಚರಿಸಲಾಯಿತು.

ಮಹಾತ್ಮ ಗಾಂಧೀಜಿ ಅವರು ಪ್ರತಿಪಾದಿಸಿದ ಮೌಲ್ಯಗಳು ಹಾಗೂ ತತ್ವಾದರ್ಶಗಳ ಕುರಿತ ಕಿರುಹೊತ್ತಿಗೆಗಳನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಮಹಾತ್ಮ ಗಾಂಧೀಜಿ ಅವರ ಜಯಂತಿ ನಿಮಿತ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ ‘ಮಹಾತ್ಮ ಗಾಂಧೀಜಿ 150’ ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು.

ಕಪಗಲ್ಲುವಿನಲ್ಲಿ ಸ್ವಚ್ಛತಾ ಶ್ರಮದಾನ:

ಗಾಂಧಿ ಜಯಂತಿ ಹಿನ್ನೆಲೆ ಜಿಲ್ಲಾಡಳಿತ, ಜಿಪಂ, ಕಪಗಲ್ಲು ಗ್ರಾಪಂ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ನಡೆಯಿತು. ಜಿಪಂ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ ಚಾಲನೆ ನೀಡಿದರು. ಜಿಪಂ ಸಿಇಒ ಕೆ.ನಿತೀಶ್, ಜಿಪಂ ಉಪಾಧ್ಯಕ್ಷೆ ಪಿ.ದೀನಾ ಮಂಜುನಾಥ, ತಾಪಂ ಅಧ್ಯಕ್ಷೆ ಬಿ.ರಮೀಜಾ, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ಗ್ರಾಪಂ ಅಧ್ಯಕ್ಷ ರಾಮಣ್ಣ ಮತ್ತಿತರರು ಪಾಲ್ಗೊಂಡಿದ್ದರು.

ನಜೀರ್ ಸಭಾಂಗಣದಲ್ಲಿ ಗಾಂಧಿ ಜಯಂತಿ ಆಚರಣೆ:

ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘ ಇವರ ಸಂಯುಕ್ತಾಶ್ರದಲ್ಲಿ ನಗರದ ಜಿಪಂ ನಜೀರ್ ಸಭಾಂಗಣದಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು.

ಸತ್ಯ ಹಾಗೂ ಅಹಿಂಸೆಯ ಹೋರಾಟದ ಹಾದಿ ಮೂಲಕ ದೇಶ ಸೇವೆ ಮಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟ ಮಹಾನ್ ವ್ಯಕ್ತಿ ಮಹಾತ್ಮ ಗಾಂಧಿ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಸೋಮಶೇಖರ್ ಸಿ.ಆರ್. ಹೇಳಿದರು.

ಒಂದು ಸಾವಿರ ಹತ್ತಿ ಬಟ್ಟೆ ಚೀಲ ಉಚಿತ ವಿತರಣೆ:

ನಗರದ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಗಾಂಧಿ ಜಯಂತಿ‌ ಆಚರಿಸಲಾಯಿತು. ನಂತರ ರಾಷ್ಟ್ರೀಯ ಸೇವಾ ಸಂಘ ಜ್ಯೋತಿ, ವಾಣಿ ಮತ್ತು ತಂಡದವರಿಂದ ಭಜನೆ ಕಾರ್ಯಕ್ರಮ ನಡೆಯಿತು. ಜ್ಯೋತಿ ಅವರು ಪರಿಸರ ಜಾಗೃತಿಯ ಬಗ್ಗೆ ಮಾಹಿತಿಯನ್ನು ನೀಡಿದರು.

ಗಾಂಧೀಜಿ ಅವರು ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿ ತಂಗಿದ್ದರಿಂದ ಈ ಸ್ಥಳದಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು. ಜೊತೆಗೆ ಪ್ಲಾಸ್ಟಿಕ್ ನಿಷೇಧ ಮಾಡಿ, ಮನೆ, ಅಂಗಡಿ ಮತ್ತು ಇನ್ನಿತರ ಸ್ಥಳಗಳಲ್ಲಿ ಹತ್ತಿಯ ಬಟ್ಟೆ ಕೈಚೀಲಗಳನ್ನು ಬಳಸಿ ಎಂದು ಜಾಗೃತಿ ಮೂಡಿಸಲಾಯಿತು. ಇಂದು ನಮೋ ಬಳ್ಳಾರಿ ತಂಡದ ಪೋಲೋ ರಾಧಾಕೃಷ್ಣ ತಯಾರು ಮಾಡಿಸಿದ ಒಂದು ಸಾವಿರ ಹತ್ತಿ ಬಟ್ಟೆಯ ಕೈಚೀಲಗಳನ್ನು ಉಚಿತವಾಗಿ ಸಾರ್ವಜನಿಕರಿಗೆ, ಪ್ರಯಾಣಿಕರಿಗೆ ವಿತರಣೆ ಮಾಡಿದರು.

Intro:
ಹಿಂಸೆ ಮತ್ತು ಸೇಡಿನ ಮಾರ್ಗಗಳಿಗಿಂತ ಆಹಿಂಸಾ ಮಾರ್ಗ ಅತ್ಯಂತ ಪರಿಣಾಮಕಾರಿಯಾದುದು ಎಂದು ವಿಶ್ವಕ್ಕೆ ಸಾರಿದವರು ನಮ್ಮ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಎಂದು ಉಪವಿಭಾಗಾಧಿಕಾರಿಗಳಾದ ರಮೇಶ ಕೋನರೆಡ್ಡಿ ಬಣ್ಣಿಸಿದರುBody:.

ಜಿಲ್ಲಾಡಳಿತ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿ ಅವರ 151ನೇ ಜನ್ಮವರ್ಷಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. 
ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿಯವರ ಕೊಡುಗೆ ದೊಡ್ಡದಿದ್ದು, ಅವರು ನಡೆಸಿದ ಆಹಿಂಸಾ ಚಳವಳಿ ಮಾರ್ಗಗಳು ಇಂದಿಗೂ ಪ್ರಸ್ತುತ ಎಂದರು.
ಹಳ್ಳಿಗಳೇ ದೇಶದ ಜೀವಾಳವೆನಿಸಿಕೊಂಡಿದ್ದ ಗಾಂಧೀಜಿಯವರು ಹಳ್ಳಿಗಳು ಮೊದಲು ಅಭಿವೃದ್ಧಿಯಾಗಬೇಕೆಂದು ಕನಸು ಕಂಡಿದ್ದರು. ಅಭಿವೃದ್ಧಿ ಎಂದರೇ ಕೇವಲ ಮೂಲಸೌಕರ್ಯಗಳ ಅಭಿವೃದ್ಧಿಯಲ್ಲ;ಅಲ್ಲಿನ ಶೈಕ್ಷಣಿಕವಾಗಿ,ಆರೋಗ್ಯ ಮತ್ತು ಅರ್ಥಿಕವಾಗಿ ಜನರ ಜೀವನಮಟ್ಟ ಸುಧಾರಣೆಯಾದಾಗ ಮಾತ್ರ ಹಳ್ಳಿ ಅಭಿವೃದ್ಧಿಯಾದಂತೆ ಎಂದಿದ್ದರು ಎಂದು ಅವರು ವಿವರಿಸಿದರು.

ದೇಶದಲ್ಲಿ ಈ ಹಿಂದೆ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗುತ್ತಿತ್ತು; ಆದರೇ ಪ್ರಸ್ತುತ ದಿನಗಳಲ್ಲಿ ಸ್ವಚ್ಛತೆಯ ಬಗ್ಗೆ ಜನರಲ್ಲಿ ಕಾಳಜಿ ಕಡಿಮೆಯಾಗಿದೆ ಎಂದು ಹೇಳಿದ ಅವರು ಜನರು ಸ್ವಚ್ಛತೆಯ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್‍ನ್ನು ತ್ಯಜಿಸಿ ಪರಿಸರ ಸ್ನೇಹಿ ಬಟ್ಟೆ ಚೀಲಗಳನ್ನು ಬಳಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಮತ್ತು ಇತರರಿಗೂ ಪ್ರೇರೆಪಿಸಬೇಕು ಎಂದರು.

ಮಹಾತ್ಮ ಗಾಂಧೀಜಿ ಅವರು ಪ್ರತಿಪಾದಿಸಿದ ಜೀವನಮೌಲ್ಯ, ಸತ್ಯ,ಆಹಿಂಸೆ ಹಾಗೂ ಆತ್ಮಬಲದ ಕುರಿತು ಉಪವಿಭಾಗಾಧಿಕಾರಿ ರಮೇಶ ಕೋನರೆಡ್ಡಿ ಅವರು ವಿವರಿಸಿದರು.

ಮಹಾತ್ಮ ಗಾಂಧೀಜಿ ಅವರು ಪ್ರತಿಪಾದಿಸಿದ ಮೌಲ್ಯಗಳು ಹಾಗೂ ತತ್ವಾದರ್ಶಗಳ ಕುರಿತ ಕಿರುಹೊತ್ತಿಗೆಗಳನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. 
ಮಹಾತ್ಮ ಗಾಂಧೀಜಿ ಅವರ ಜಯಂತಿ ನಿಮಿತ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ “ಮಹಾತ್ಮ ಗಾಂಧೀಜಿ 150”ಸಾಕ್ಷ್ಯಚಿತ್ರಗಳನ್ನು ಪ್ರದರ್ಶಿಸಲಾಯಿತು.

Conclusion:ಈ ಸಮಯದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸ್ಥಾನಿಕ ತಹಸೀಲ್ದಾರ್ ವಿಶ್ವಜೀತ್ ಮೆಹತಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬಿ.ಕೆ.ರಾಮಲಿಂಗಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶಬಾಬು, ಸಹಕಾರ ಸಂಘಗಳ ಉಪನಿಬಂಧಕಿ ಡಾ.ಸುನೀತಾ ಸಿದ್ರಾಮ್, ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಪಿ.ಶುಭಾ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ವಾಗೀಶ ಶಿವಾಚಾರ್ಯ, ಅಬಕಾರಿ ಇಲಾಖೆಯ ವಿನೋದ ಡಾಂಗೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗರಾಜಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ನೌಕರರು,ಸಾರ್ವಜನಿಕರು ಇದ್ದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.