ಬಳ್ಳಾರಿ: ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಗುರುವಾರ 1,865 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 14 ಮಂದಿ ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 68,634ಕ್ಕೆ ಏರಿಕೆಯಾಗಿದ್ದರೆ, ಮೃತರ ಸಂಖ್ಯೆ 993ಕ್ಕೇರಿದೆ. ಗುರುವಾರ 993 ಜನರು ಡಿಸ್ಚಾರ್ಜ್ ಆಗಿದ್ದು, ಒಟ್ಟು 49,668 ಜನರು ಗುಣಮುಖರಾಗಿ ಬಿಡುಗಡೆಯಾದಂತಾಗಿದೆ.
ಜಿಲ್ಲೆಯಲ್ಲಿ 17,973 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ ಬಳ್ಳಾರಿ-645, ಸಂಡೂರು- 226, ಸಿರುಗುಪ್ಪ-161, ಹೊಸಪೇಟೆ-304, ಹೆಚ್ಬಿ ಹಳ್ಳಿ-142, ಕೂಡ್ಲಿಗಿ-139, ಹರಪನಹಳ್ಳಿ-140, ಹಡಗಲಿ-99 ಮತ್ತು ಹೊರ ರಾಜ್ಯದಿಂದ ಬಂದ 6, ಹಾಗೂ ಹೊರ ಜಿಲ್ಲೆಯ 3ರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಕಂಟ್ರೋಲ್ ರೂಂ ಕಾರ್ಯಾರಂಭ:
ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಸಾರ್ವಜನಿಕರ ಕುಂದು ಕೊರತೆಗಳ ನಿವಾರಣೆ ಹಾಗೂ ಮಾಹಿತಿಗಾಗಿ ಈಗಾಗಲೇ ಬಳ್ಳಾರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕೋವಿಡ್ ಕಂಟ್ರೋಲ್ ರೂಂ ಕಾರ್ಯನಿರ್ವಹಿಸುತ್ತಿದೆ ಎಂದು ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಪ್ರಸ್ತುತ ದಿನಗಳಲ್ಲಿ ಕೊರೊನಾ ಸೋಂಕಿತರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರ ಸಮಸ್ಯೆಗಳ ಸ್ಪಂದನೆ ಮತ್ತು ತುರ್ತು ಪರಿಹಾರಕ್ಕಾಗಿ ಸಾರ್ವಜನಿಕ ಹಿತದೃಷ್ಠಿಯಿಂದ ನೂತನವಾಗಿ ರಚನೆಯಾಗಿರುವ ವಿಜಯನಗರ ಜಿಲ್ಲೆಯಲ್ಲಿ ಪ್ರತ್ಯೇಕ ಕೋವಿಡ್ ಕಂಟ್ರೋಲ್ ರೂಂ ಅನ್ನು ಹೊಸಪೇಟೆಯ ವಿಜಯನಗರ ಕಾಲೇಜು ಹತ್ತಿರವಿರುವ ಒಳಾಂಗಣ ಕ್ರೀಡಾಂಗಣದಲ್ಲಿ ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕುಂದುಕೊರತೆಗಳ ನಿವಾರಣೆಗಾಗಿ ಕಂಟ್ರೋಲ್ ರೂಂ ಸಂಪರ್ಕಿಸಿ:ಡಿಸಿ
ವಿಜಯನಗರ ಜಿಲ್ಲೆಗೆ ಸೇರಿದ ತಾಲೂಕುಗಳಾದ ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ, ಹೂವಿನ ಹಡಗಲಿ, ಕೂಡ್ಲಿಗಿ, ಕೊಟ್ಟೂರು ಹಾಗೂ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕುಗಳ ಸಾರ್ವಜನಿಕರು ಹಾಗೂ ಹೋಂ ಐಸೊಲೇಷನ್‌ನಲ್ಲಿರುವ ಸೋಂಕಿತರು ಲ್ಯಾಂಡ್ ಲೈನ್ ದೂರವಾಣಿ ಸಂಖ್ಯೆ: 08394-299920, 08394-299921, 08394-299922, 08394-299923 ಹಾಗೂ ಮೊಬೈಲ್ / ವಾಟ್ಸ್ ಆ್ಯಪ್ ಸಂಖ್ಯೆ: 9353449332, 9353470655 ಗೆ ಸಂಪರ್ಕಿಸಿ ಕೋವಿಡ್ಗೆ ಸಂಬಂಧಿಸಿದ ಸಂದೇಶಗಳನ್ನು ಕಳುಹಿಸುವ ಮೂಲಕ ಸೂಕ್ತ ಪರಿಹಾರ ಪಡೆದುಕೊಳ್ಳಬಹುದಾಗಿದೆ.
ಬಳ್ಳಾರಿ ಜಿಲ್ಲೆಗೆ ಸಂಬಂಧಿಸಿದ ತಾಲೂಕುಗಳಾದ ಬಳ್ಳಾರಿ, ಸಿರುಗುಪ್ಪ, ಸಂಡೂರು, ಕುರುಗೋಡು ತಾಲೂಕುಗಳ ಸಾರ್ವಜನಿಕರು ಹಾಗೂ ಹೋಂ ಐಸೊಲೇಷನ್‌ನಲ್ಲಿರುವ ಸೋಂಕಿತರು ಲ್ಯಾಂಡ್ ಲೈನ್ ದೂರವಾಣಿ ಸಂಖ್ಯೆ: 08392-277100 ಹಾಗೂ ಮೊಬೈಲ್ / ವಾಟ್ಸ್ ಆ್ಯಪ್ ಸಂಖ್ಯೆ: 8277888866 ಗೆ ಸಂಪರ್ಕಿಸಿ ಹಾಗೂ ವಾಟ್ಸ್ ಆ್ಯಪ್ ಸಂಖ್ಯೆಗೆ ಕೋವಿಡ್ಗೆ ಸಂಬಂಧಿಸಿದ ಸಂದೇಶಗಳನ್ನು ಕಳುಹಿಸುವ ಮೂಲಕ ಸೂಕ್ತ ಪರಿಹಾರ ಪಡೆದುಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.