ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ಹಚ್ಚೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 20 ವರ್ಷದ ಪ್ರೇಮಾ ಎಂಬ ಯುವತಿ ಫೆ.22ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ ಎಂದು ಹಚ್ಚೊಳ್ಳಿ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಣೆಯಾದ ಯುವತಿಯ ಚಹರೆ: ಎತ್ತರ 5 ಅಡಿ, ಸಾಧಾರಣ ಮೈಕಟ್ಟು, ದುಂಡುಮುಖ, ಗೋಧಿ ಮೈಬಣ್ಣ, ಕನ್ನಡ ಭಾಷೆ ಬಲ್ಲವಳಾಗಿದ್ದು ಕಾಣೆಯಾದ ದಿವಸ ಹಸಿರು ಬಣ್ಣದ ಚುಡಿದಾರ್ ಧರಿಸಿರುತ್ತಾಳೆ.
ಯುವತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಹಚ್ಚೊಳ್ಳಿ ಠಾಣೆ ಉಪ ನಿರೀಕ್ಷಕರು ದೂ.ಸಂ. 9480803054 ಹಾಗೂ ಸಿರುಗುಪ್ಪ ವೃತ್ತ ನಿರೀಕ್ಷಕರು 9480803032ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.