ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 268 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ ಮತ್ತು 483 ಮಂದಿ ಗುಣಮುಖರಾಗಿದ್ದಾರೆ.
ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಸೋಂಕಿತರ ಸಂಖ್ಯೆ 7530 ಹಾಗೂ ಮೃತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ. ಈವರೆಗೆ 4022 ಮಂದಿ ಗುಣಮುಖರಾಗಿ 3407 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.
ಇಂದು 483 ಮಂದಿ ಮಹಾಮಾರಿ ಸೋಂಕಿನಿಂದ ಗುಣಮುಖರಾಗಿ ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.