ಬಳ್ಳಾರಿ: ಕೊರೊನಾ ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಬಳ್ಳಾರಿ ಕೋವಿಡ್ ಆಸ್ಪತ್ರೆಯಿಂದ ಸೋಮವಾರ ಸಂಜೆ 27 ಜನರನ್ನು ಬಿಡುಗಡೆ ಮಾಡಲಾಯಿತು.
28 ಪಾಸಿಟಿವ್ ಪ್ರಕರಣಗಳು ಸೇರಿದಂತೆ ಇದುವರೆಗೆ 470 ಪ್ರಕರಣಗಳು ದೃಢಪಟ್ಟಿವೆ. ಈವರೆಗೆ 139 ಜನರು ಬಿಡುಗಡೆಯಾದಂತಾಗಿದ್ದು,328ಪ್ರಕರಣಗಳು ಸಕ್ರಿಯವಾಗಿವೆ. ಇನ್ನು ಇದುವರೆಗೆ 3ಜನರು ಸಾವಿಗೀಡಾಗಿದ್ದಾರೆ.
ಮನೆಯತ್ತ ತೆರಳಲು ಸಿದ್ಧರಾಗಿ ನಿಂತಿದ್ದವರಿಗೆ ಹೂಗುಚ್ಛ, ಹಣ್ಣು-ಹಂಪಲು ನೀಡಿ ಚಪ್ಪಾಳೆ ತಟ್ಟಿ ಅಭಿನಂದಿಸಲಾಯಿತು.