ಬಳ್ಳಾರಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಉಲ್ಬಣವಾಗುತ್ತಿದ್ದು ಇಂದು ಬರೋಬ್ಬರಿ 275 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
ಇಂದು ಒಂದೇ ದಿನ 275 ಮಂದಿಗೆ ಕೊರೊನಾ ಸೋಂಕು ತಗುಲಿದ ಪರಿಣಾಮ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6582ಕ್ಕೆ ಏರಿಕೆಯಾಗಿದೆ. ಈ ಪೈಕಿ 3416 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ 3069 ಸಕ್ರಿಯ ಪ್ರಕರಣಗಳಿವೆ.
ಇಬ್ಬರು ಸಾವನ್ನಪ್ಪಿದ್ದು ಮೃತರ ಸಂಖ್ಯೆ 97ಕ್ಕೆ ಏರಿಕೆಯಾಗಿದೆ. ಇನ್ನೂ 408 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.